
ನವದೆಹಲಿ(ಮಾ.10): ಲೋಕಸಭಾ ಮಹಾ ಸಮರಕ್ಕೆ ಇಂದೇ ಮುಹೂರ್ತ ಫಿಕ್ಸ್ ಆಗಲಿದ್ದು, ಇಂದು ಸಂಜೆ 5 ಗಂಟೆಗೆ ಚುನಾವಣಾ ಆಯೋಗದಿಂದ ಸುದ್ದಿಗೋಷ್ಠಿ ನಡೆಯಲಿದೆ.
ದೆಹಲಿಯ ವಿಜ್ಞಾನ ಭವದಲ್ಲಿ ಚುನಾವಣಾ ಆಯೋಗದಿಂದ ಸುದ್ದಿಗೋಷ್ಠಿ ನಡೆಯಲಿದ್ದು, ದೇಶಾದ್ಯಂತ 8 ಅಥವಾ 9 ಹಂತದಲ್ಲಿ ಚುನಾವಣೆ ನಡೆಸಲು ಆಯೋಗ ಸಿದ್ಧತೆ ನಡೆಸಿದೆ.
ಕರ್ನಾಟಕದಲ್ಲಿ ಒಂದೇ ಹಂತದಲ್ಲಿ ಮತದಾನ ನಡೆಯುವ ಸಾಧ್ಯತೆ ಇದ್ದು, ದಿನಾಂಕ ಘೋಷಣೆಯಾದ ಕ್ಷಣದಿಂದಲೇ ನೀತಿ ಸಂಹಿತೆ ಜಾರಿಯಾಗಲಿದೆ.
2014ರ ಹಿನ್ನೋಟ:
2014ರಲ್ಲಿ 9 ಹಂತದಲ್ಲಿ ಏಪ್ರಿಲ್ 7 ರಿಂದ ಮೇ 12ರವರೆಗೆ ಚುನಾವಣೆ ನಡೆದಿತ್ತು. ಕರ್ನಾಟಕದಲ್ಲಿ ಏಪ್ರಿಲ್ 17ರಂದು ಒಂದೇ ಹಂತದಲ್ಲಿ ಮತದಾನವಾಗಿತ್ತು. ಈ ಬಾರಿಯೂ ರಾಜ್ಯದಲ್ಲಿ ಒಂದೇ ಹಂತದ ಮತದಾನದ ದಿನ ನಿಗದಿಯಾಗುವ ಸಾಧ್ಯತೆ ಇದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.