
ದಾವಣಗೆರೆ(ಜೂ.21): ತಾವು ಮಾಡಿಕೊಂಡ ಸಾಲ ತೀರಿಸಲು ಪ್ರೇಮಿಗಳಿಬ್ಬರು ಪಕ್ಕದ ಮನೆಯಲ್ಲೇ ಕಳ್ಳತನಕ್ಕೆ ಯತ್ನಿಸಿ, ಸಿಕ್ಕಿಬಿದ್ದ ಘಟನೆ ದಾವಣಗೆರೆಯಲ್ಲಿ ನಡೆದಿದೆ.
ರವಿ ಎಂಬ ಯುವಕ ಮತ್ತು ಆತನ ಪ್ರೇಯಸಿ ಇಬ್ಬರು ಸೇರಿ, ದಾವಣಗೆರೆಯ ದೇವರಾಜ್ ಅರಸ್ ಬಡಾವಣೆಯ BSNL ಕ್ವಾಟ್ರಸ್ ನಲ್ಲಿ ಈ ಕೃತ್ಯ ಎಸಗಿದ್ದಾರೆ. ಸರೋಜಮ್ಮ ಎಂಬ ಮಹಿಳೆ ಒಬ್ಬರೇ ಇರುವಾಗ ಒಳನುಗ್ಗಿದ ಈ ಇಬ್ಬರು, ಮಹಿಳೆಯ ಮುಖಕ್ಕೆ ಕ್ರಿಮಿನಾಶಕ ಸ್ಪ್ರೇ ಎರಚಿದ್ದಾರೆ. ಬಳಿಕ ಪ್ರಜ್ಞೆತಪ್ಪಿದ ಮಹಿಳೆ ಸರೋಜಮ್ಮನ ಕುತ್ತಿಗೆಯಲ್ಲಿದ್ದ ಚಿನ್ನದ ಸರ ಕದ್ದು ಪರಾರಿಯಾಗುವಾಗ ಅಕ್ಕಪಕ್ಕದ ಮನೆಯವರಿಗೆ ಸಿಕ್ಕಿಬಿದ್ದಿದ್ದಾರೆ. ಪ್ರೇಮಿಗಳಿಬ್ಬರನ್ನು ವಶಕ್ಕೆ ಪಡೆದ ಬಸವನಗರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ವಿಚಾರಣೆ ನಡೆಸಿದ್ದಾರೆ. ಇನ್ನು ಹಲ್ಲೆಗೊಳಗಾಗಿ ಗಾಯಗೊಂಡ ಸರೋಜಮ್ಮನನ್ನು ದಾವಣಗೆರೆಯ ಖಾಸಗಿ ಅಸ್ಪತ್ರೆ ಒಂದಕ್ಕೆ ದಾಖಲಿಸಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.