
ದಾವಣಗೆರೆ[ಜೂ.15]: ಪ್ರೀತಿಸಿ ಮದುವೆಯಾದ ಯುವತಿ ನನಗೆ ಸಿಗಲಿಲ್ಲ. ನಮ್ಮ ಜೋಡಿಯನ್ನು ಪೊಲೀಸರೇ ಬೇರ್ಪಡಿಸಿದರು ಎಂದು ಮನನೊಂದ ಯುವಕನೊಬ್ಬ ಆತ್ಮಹತ್ಯೆಗೆ ಯತ್ನಿಸಿದ ಘಟನೆ ದಾವಣಗೆರೆಯಲ್ಲಿ ನಡೆದಿದೆ.
ದಾವಣಗೆರೆಯ ಮಹಾರಾಜ ಸೋಪ್ ಇಂಡಸ್ಟ್ರೀ ವಾಚ್ಮನ್ ರಾಜೇಂದ್ರಸಿಂಗ್ ಎಂಬಾತ ಸೆಲ್ಫಿ ವಿಡಿಯೋ ಮಾಡಿಕೊಂಡು ವಿಷ ಸೇವಿದ್ದಾನೆ. ರಾಜೇಂದ್ರ ಸಿಂಗ್ ಮತ್ತು ಕಾವ್ಯ ಎಂಬ ಯುವತಿ ಪರಸ್ಪರ ಪ್ರೀತಿಸಿ ದೇವಸ್ಥಾನ ಒಂದರಲ್ಲಿ ಮದುವೆಯಾಗಿದ್ದರು. ಇದಕ್ಕೆ ಯುವತಿ ಮನೆಯವರ ವಿರೋಧವಿದ್ದು, ಹದಡಿ ಪೊಲೀಸ್ ಠಾಣೆಯಲ್ಲಿ ಕಿಡ್ನಾಪ್ ಪ್ರಕರಣ ದಾಖಲಿಸಿದ್ದರು. ಬಳಿಕ ಪ್ರೇಮಿಗಳನ್ನು ಪೊಲೀಸರು ಠಾಣೆಗೆ ಕರೆ ತಂದು ವಿಚಾರಿಸಿದ್ದಾರೆ. ಆಗ ತಂದೆ-ತಾಯಿಯ ಒತ್ತಡಕ್ಕೆ ಮಣಿದ ಯುವತಿ ಕಾವ್ಯ, ನಾನು ಬಲವಂತದಿಂದ ಅವನ ಜೊತೆ ಹೋಗಿದ್ದೆ. ಬರದಿದ್ದರೆ ಕೊಲೆ ಮಾಡುವುದಾಗಿ ಬೆದರಿಸಿದ್ದ ಎಂದು ಹೇಳಿಕೆ ಕೊಟ್ಟು ತವರು ಮನೆಗೆ ಹೋಗಿದ್ದಾಳೆ.
ಇದರಿಂದ ತೀವ್ರ ಮನನೊಂದ ರಾಜೇಂದ್ರ ಸಿಂಗ್ ಸೆಲ್ಫಿ ವಿಡಿಯೋವೊಂದರಲ್ಲಿ ಪೊಲೀಸರೇ ನಮ್ಮಿಬ್ಬರನ್ನು ದೂರ ಮಾಡಿದ್ದಾರೆಂದು ಆರೋಪಿಸಿ ವಿಷ ಸೇವಿಸಿದ್ದಾನೆ. ಸದ್ಯ ಯುವಕ ಪ್ರಾಣಾಪಾಯದಿಂದ ಪಾರಾಗಿದ್ದು, ದಾವಣಗೆರೆಯ ಚಿಟಗೇರಿ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.