
ಪಣಜಿ: ಬುಧವಾರವಷ್ಟೇ ಎಂಜಿಪಿ ತೊರೆದು ಬಿಜೆಪಿ ಸೇರ್ಪಡೆಯಾಗಿದ್ದ ಪ್ರವಾಸೋದ್ಯಮ ಸಚಿವ ಮನೋಹರ್ ಅಜಗಾಂವ್ಕರ್ ಅವರನ್ನು ಗೋವಾದ ಉಪಮುಖ್ಯಮಂತ್ರಿಯಾಗಿ ನಿಯೋಜಿಸಲಾಗಿದೆ.
ಇದರೊಂದಿಗೆ ರಾಜ್ಯದಲ್ಲಿ 2ನೇ ಡಿಸಿಎಂ ನೇಮಕವಾಗಿದೆ. ಈಗಾಗಲೇ ಜಿಎಫ್‌ಪಿಯ ವಿಜಯ್ ಸರ್‌ದೇಸಾಯಿ ಅವರನ್ನು ಡಿಸಿಎಂ ಆಗಿ ನೇಮಕ ಮಾಡಲಾಗಿದೆ.
ಈ ಕುರಿತು ರಾಜ್ಯ ಸರ್ಕಾರ ಗುರುವಾರ ಆದೇಶ ಹೊರಡಿಸಿದೆ. ಇದಕ್ಕೂ ಮೊದಲು ಡಿಸಿಎಂ ಆಗಿದ್ದ ಎಂಜಿಪಿಯ ಧಾವಳೀಕರನ್ನು ಸರ್ಕಾರ, ಸರ್ಕಾರದ ವಿರೋಧಿ ಚಟುವಟಿಕೆ ನಡೆಸಿದ ಆರೋಪದ ಮೇಲೆ ಹುದ್ದೆಯಿಂದ ಕಿತ್ತುಹಾಕಿತ್ತು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.