
ಮಂಡ್ಯ/ಮದ್ದೂರು: ನನಗೆ ಮಂಡ್ಯ ಸೇರಿದಂತೆ ಯಾವುದೇ ಜಿಲ್ಲೆಯ ಉಸ್ತುವಾರಿ ಸಚಿವ ಸ್ಥಾನ ಬೇಡ. ಆ ಸ್ಥಾನದ ಬಗ್ಗೆ ನನಗೆ ಆಸಕ್ತಿಯೂ ಇಲ್ಲ ಎಂದು ಸಾರಿಗೆ ಸಚಿವ ಡಿ.ಸಿ. ತಮ್ಮಣ್ಣ ಬುಧವಾರ ಮದ್ದೂರಿನಲ್ಲಿ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ತಮ್ಮಣ್ಣ ನಾನು ಮಂಡ್ಯ ಜಿಲ್ಲೆ ಸೇರಿದಂತೆ ರಾಜ್ಯದ ಯಾವುದೇ ಜಿಲ್ಲೆಯ ಉಸ್ತುವಾರಿಯನ್ನು ಬಯಸಿರಲಿಲ್ಲ.
ಮುಖ್ಯಮಂತ್ರಿಗಳೇ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಸ್ಥಾನ ನೀಡಿದ್ದಾರೆ. ನನಗೆ ಯಾವ ಜಿಲ್ಲೆಯ ಉಸ್ತುವಾರಿಯನ್ನೂ ಹಿಸಿಕೊಳ್ಳುವುದಕ್ಕೆ ಆಸಕ್ತಿ ಇರಲಿಲ್ಲ. ಈ ವಿಷಯವನ್ನು ನಾನು ಸಿಎಂ ಎಚ್.ಡಿ. ಕುಮಾರಸ್ವಾಮಿ ಜತೆ ಚರ್ಚಿಸಿ ತೀರ್ಮಾನ ಕೈಗೊಳ್ಳುತ್ತೇನೆ ಎಂದರು.
ಬೆಟ್ಟದಷ್ಟು ಕೆಲಸ: ನನಗೆ ಸಾರಿಗೆ ಸಚಿವ ಹುದ್ದೆಯೇ ಸಾಕು. ಇಲ್ಲಿ ಮಾಡುವ ಕೆಲಸವೇ ಬೆಟ್ಟದಷ್ಟಿದೆ. ಜಿಲ್ಲಾ ಉಸ್ತುವಾರಿ ಸಚಿವ ಹುದ್ದೆ ಬಗ್ಗೆ ನನಗೆ ಯಾವುದೇ ಆಸಕ್ತಿ ಇಲ್ಲ ಎಂದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.