
ಬೆಂಗಳೂರು[ಜು.25] ಸಮನ್ವಯ ಸಮಿತಿ ಸಭೆಗೆ ಹೈ ಕಮಾಂಡ್ ಸೂಚನೆ ಅಗತ್ಯವಿಲ್ಲ. ನಮಗೆ ಯಾವಾಗ ಬೇಕೋ, ಆವಾಗ ಅಧ್ಯಕ್ಷರು ಸಭೆ ಕರೆಯುತ್ತಾರೆ. ನಾವು ತಿಂಗಳಿಗೊಮ್ಮೆ, ಎರಡು ತಿಂಗಳಿಗೊಮ್ಮೆ ಸಭೆ ಸೇರಬೇಕು ಅನ್ಕೊಂಡಿದ್ದೇವೆ ಎಂದು ಡಿಸಿಎಂ ಡಾ.ಜಿ.ಪರಮೇಶ್ವರ ಹೇಳಿದ್ದಾರೆ.
ಚುಂಚನಗಿರಿಯಲ್ಲಿ ಮಾತನಾಡಿ, ನಮ್ಮಪಕ್ಷದಿಂದ ಮಾಜಿ ಸ್ಪೀಕರ್ ಕೋಳಿವಾಡ, ರಾಜಣ್ಣಗೆ ನೋಟಿಸ್ ನೀಡಲಾಗಿದೆ. ಅಧ್ಯಕ್ಷರು ನೋಟಿಸ್ ಕೊಟ್ಟಿದ್ದಾರೆ ಅದಕ್ಕೆ ಯಾವ ಉತ್ತರ ನೀಡುತ್ತಾರೆ ನೋಡೋಣ ಎಂದರು.
ಸಿದ್ದರಾಮಯ್ಯ ರಾಷ್ಟ್ರ ರಾಜಕಾರಣ ಪ್ರವೇಶ ಮಾಡುವ ವಿಚಾರ ಅವರನ್ನೇ ಕೇಳಬೇಕು. ನಮ್ಮ ಪಕ್ಷದ ನಾಯಕರಾಗಿ ಜವಾಬ್ದಾರಿ ಹೊತ್ತಿರುವವರು. ಹಾಗಾಗಿ ವರ್ಕಿಂಗ್ ಕಮಿಟಿಗೆ ಅವರನ್ನ ತೆಗೆದುಕೊಂಡಿದ್ದಾರೆ. ಅಷ್ಟಕ್ಕೇ ರಾಷ್ಟ್ರ ರಾಜಕಾರಣಕ್ಕೆ ಹೋಗುತ್ತಾರೆ ಎಂದು ಅರ್ಥ ಅಲ್ಲ ಎಂದರು.
ಮೂವರು ಕಾಂಗ್ರೆಸ್ ನಾಯಕರ ಬಿಜೆಪಿ ಸೇರ್ಪಡೆ ವಿಚಾರ ನನಗೆನು ಗೊತ್ತಿಲ್ಲ. ಮಂಡ್ಯದಲ್ಲಿ ನಡೆದಿದೆ ಎನ್ನಲಾದ ಲಾಖಪ್ ಡೆತ್ ತನಿಖೆ ನಡೆಯುತ್ತಿದೆ. ವರದಿ ಬಂದ ಬಳಿಕ ಸೂಕ್ತ ಕ್ರಮ ತೆಗೆದುಕೊಳ್ಳುತ್ತೇನೆ.
ಲೋಕಸಭೆಗೆ ಟಿಕೆಟ್ ಹಂಚಿಕೆ ಇನ್ನೂ ಚರ್ಚೆ ಆಗಿಲ್ಲ. ಈಗಾಗಲೇ 6ನೇ ವೇತನ ಸಮಿತಿಗೆ ಶಿಫಾರಸ್ಸು ಮಾಡಲಾಗಿದೆ. ವರದಿ ಜಾರಿಗೆ ಚಿಂತನೆ ನಡೆಯುತ್ತಿದೆ ಎಂದು ತಿಳಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.