ಮಲ್ಲಿಕಾರ್ಜುನ್ ಖರ್ಗೆಗೆ ಸಿಎಂ ಆಗುವ ಅವಕಾಶ ಬಂದಿತ್ತು

Published : Jul 21, 2018, 11:44 AM IST
ಮಲ್ಲಿಕಾರ್ಜುನ್ ಖರ್ಗೆಗೆ ಸಿಎಂ ಆಗುವ ಅವಕಾಶ ಬಂದಿತ್ತು

ಸಾರಾಂಶ

ಕಾಂಗ್ರೆಸ್ ಹಿರಿಯ ಮುಖಂಡ ಮಲ್ಲಿಕಾರ್ಜುನ್ ಖರ್ಗೆ ಅವರು ಯಾವುದೇ ಗುರುತರ ಆರೋಪವಿಲ್ಲದೇ ದುಡಿದಿದ್ದಾರೆ. ರಾಜ್ಯಾದ್ಯಂತ ಕೇವಲ ದಲಿತ ನಾಯಕರಾಗಿ ಉಳಿಯದೆ ಎಲ್ಲಾ ಸಮುದಾಯಗಳ ಅಭಿವೃದ್ಧಿಗಾಗಿ ಕೆಲಸ ಮಾಡಿದ್ದರು ಎಂದು ಉಪ ಮುಖ್ಯಮಂತ್ರಿ ಜಿ.ಪರಮೇಶ್ವರ್ ಹೇಳಿದರು.

ಬೆಂಗಳೂರು : ಸಾರ್ವಜನಿಕ ಜೀವನದಲ್ಲಿ ಸುದೀರ್ಘ ಕಾಲ ಯಾವುದೇ ಗುರುತರ ಆರೋಪವಿಲ್ಲದೆ ದುಡಿದಿರುವ ಮಲ್ಲಿಕಾರ್ಜುನ ಖರ್ಗೆ ಅವರು ಹಿಂದೆಯೇ ಮುಖ್ಯಮಂತ್ರಿ ಆಗಬೇಕಾಗಿತ್ತು. ಆದರೆ, ಕೆಲವೊಂದು ವಿಚಾರಗಳಿಂದಾಗಿ ಅವರು ಮುಖ್ಯಮಂತ್ರಿ ಆಗಿಲ್ಲ ಎಂದು ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್ ಬೇಸರ ವ್ಯಕ್ತಪಡಿಸಿದರು. ಶುಕ್ರವಾರ ಬೆಂಗಳೂರು ಪ್ರೆಸ್‌ಕ್ಲಬ್‌ನಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರ ಜನ್ಮದಿನದ ಅಂಗವಾಗಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಸತತವಾಗಿ 11 ಬಾರಿ ಗೆಲ್ಲುವುದು ತಮಾಷೆಯ ಮಾತಲ್ಲ. ಜನರು ಅವರನ್ನು ಎಷ್ಟರ ಮಟ್ಟಿಗೆ ಒಪ್ಪಿಕೊಂಡಿದ್ದಾರೆ ಎಂಬುದನ್ನು ಅದು ತೋರುತ್ತದೆ. ರಾಜ್ಯಾದ್ಯಂತ ಕೇವಲ ದಲಿತ ನಾಯಕರಾಗಿ ಉಳಿಯದೆ ಎಲ್ಲಾ ಸಮುದಾಯಗಳ ಅಭಿವೃದ್ಧಿಗಾಗಿ ಕೆಲಸ ಮಾಡಿದ್ದರು ಎಂದು ಹೇಳಿದರು. 

ನಮ್ಮ ಕುಟುಂಬದ ಸದಸ್ಯ: ನಮ್ಮ ತಂದೆಯ ಜತೆ ಆತ್ಮೀಯ ಸಂಬಂಧ ಹೊಂದಿದ್ದ ಮಲ್ಲಿಕಾರ್ಜುನ ಖರ್ಗೆ ಅವರು ನಮ್ಮ ತಂದೆಯ ಹಿರಿಯ ಮಗನಂತಿದ್ದರು. ನಮ್ಮ ತಂದೆ ಸ್ಥಾಪಿಸಿರುವ ಸಿದ್ಧಾರ್ಥ ಶಿಕ್ಷಣ ಸಂಸ್ಥೆಗಳಿಗೆ ಸತತ 18 ವರ್ಷ ಕಾಲ ಮಲ್ಲಿಕಾರ್ಜುನ ಖರ್ಗೆ ಅಧ್ಯಕ್ಷರಾಗಿದ್ದರು. ಈ ಮೂಲಕ ಅವರು ನಮ್ಮ ಕುಟುಂಬದ ಸದಸ್ಯರಾಗಿದ್ದರು. ಅವರು ಎಂದೆಂದಿಗೂ ನನ್ನ ಮಾರ್ಗದರ್ಶಕರು ಹಾಗೂ ನಾಯಕರು ಎಂದು ತಿಳಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಯಹೂದಿ ನರಮೇಧ ನಡೆಸಿದ ತಂದೆ-ಮಗನಿಗೆ ಐಸಿಸ್‌ ಲಿಂಕ್‌ ದೃಢ
ಪ್ರಧಾನಿ ಮೋದಿ ಕೂರಿಸಿ ಜೋರ್ಡಾನ್‌ ಪ್ರಿನ್ಸ್‌ ಕಾರು ಚಾಲನೆ!