ಕ್ಷಿಪ್ರ ರಾಜಕೀಯ ಕ್ರಾಂತಿಯ ಸಾಧ್ಯತೆ : ಡಿಸಿಎಂ ವಿದೇಶಿ ಪ್ರವಾಸ ರದ್ದು

Published : Sep 10, 2018, 07:44 PM ISTUpdated : Sep 19, 2018, 09:22 AM IST
ಕ್ಷಿಪ್ರ ರಾಜಕೀಯ ಕ್ರಾಂತಿಯ ಸಾಧ್ಯತೆ : ಡಿಸಿಎಂ ವಿದೇಶಿ ಪ್ರವಾಸ ರದ್ದು

ಸಾರಾಂಶ

ಪ್ರಸ್ತುತ ರಾಜಕೀಯ ವಿದ್ಯಮಾನಗಳು ಪಕ್ಷಕ್ಕೆ ಮಾರಕವಾಗಿರೋ ಹಿನ್ನೆಲೆಯಲ್ಲಿ ಸದ್ಯಕ್ಕೆ ವಿದೇಶ ಪ್ರವಾಸ ಮಾಡದಂತೆ ಪರಮೇಶ್ವರ್ ಗೆ ಹೈಕಮಾಂಡ್ ಸೂಚನೆ ನೀಡಿದೆ

ಬೆಂಗಳೂರು[ಸೆ.10]: ರಾಜ್ಯದಲ್ಲಿ ಕ್ಷಿಪ್ರ ರಾಜಕೀಯ ಕ್ರಾಂತಿ ಸಾಧ್ಯತೆಯ ಹಿನ್ನಲೆಯಲ್ಲಿ ಡಿಸಿಎಂ ಡಾ. ಜಿ. ಪರಮೇಶ್ವರ್ ವಿದೇಶ ಪ್ರವಾಸ ರದ್ದುಗೊಳಿಸಿದ್ದಾರೆ.

ಉಪಮುಖ್ಯಮಂತ್ರಿ ಜಿ. ಪರಮೇಶ್ವರ್  ಅಮೆರಿಕಾದ ಸ್ಯಾನ್ ಪ್ರಾನ್ಸಿಸ್ಕೋ ದಲ್ಲಿ  ಗ್ಲೋಬಲ್ ಕ್ಲೈಮೇಟ್ ಆಕ್ಷನ್ ಸಮ್ಮಿಟ್ ನಲ್ಲಿ ಭಾಗವಹಿಸಲು ಮೂರು ದಿನಗಳ ಪ್ರವಾಸ ಕೈಗೊಳ್ಳಬೇಕಿತ್ತು. ಆದರೆ ಪ್ರಸ್ತುತ ರಾಜಕೀಯ ವಿದ್ಯಮಾನಗಳು ಪಕ್ಷಕ್ಕೆ ಮಾರಕವಾಗಿರೋ ಹಿನ್ನೆಲೆಯಲ್ಲಿ ಸದ್ಯಕ್ಕೆ ವಿದೇಶ ಪ್ರವಾಸ ಮಾಡದಂತೆ ಪರಮೇಶ್ವರ್ ಗೆ ಹೈಕಮಾಂಡ್ ಸೂಚನೆ ನೀಡಿದೆ.

ಹೈಕಮಾಂಡ್ ಸೂಚನೆ ಹಿನ್ನೆಲೆಯಲ್ಲಿ ನಾಳೆಯಿಂದ ಆರಂಭವಾಗಬೇಕಿದ್ದ ಪ್ರವಾಸವನ್ನು ಡಿಸಿಎಂ ರದ್ದುಗೊಳಿಸಿದ್ದಾರೆ. ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಬಂಧನ ಭೀತಿಯಲ್ಲಿರುವ ಹಿನ್ನೆಲೆ ಹಾಗೂ ಶಾಸಕರನ್ನು ಸೆಳೆಯಲು ಪ್ರತಿಪಕ್ಷ ಬಿಜೆಪಿ ಪ್ಲಾನ್ ಮಾಡುತ್ತಿರುವ ಬಗ್ಗೆ ಮಾಹಿತಿ ಇದ್ದು  ಸದ್ಯದ ಸ್ಥಿತಿಯಲ್ಲಿ ನಿಗದಿಯಾಗಿದ್ದ ವಿದೇಶ ಪ್ರವಾಸವನ್ನು ರದ್ದುಪಡಿಸಲು ಡಾ.ಜಿ.ಪರಮೇಶ್ವರ್ ಮುಂದಾಗಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
'ನನ್ನ ಸಂತೋಷ ಅಮೂಲ್ಯ, ಕರ್ಮದಲ್ಲಿ ನನಗೆ ನಂಬಿಕೆ ಇದೆ..' ದಿಲೀಪ್‌ ಖುಲಾಸೆ ಬೆನ್ನಲ್ಲೇ ವೈರಲ್‌ ಆದ ಜಾಕಿ ಭಾವನಾ ಮಾತು!