ಕೇಂದ್ರ ಸರ್ಕಾರಿ ನೌಕರರಿಗೆ ಭರ್ಜರಿ ಗುಡ್ ನ್ಯೂಸ್

Published : Aug 30, 2018, 11:18 AM ISTUpdated : Sep 09, 2018, 09:59 PM IST
ಕೇಂದ್ರ ಸರ್ಕಾರಿ ನೌಕರರಿಗೆ ಭರ್ಜರಿ ಗುಡ್ ನ್ಯೂಸ್

ಸಾರಾಂಶ

ಕೇಂದ್ರ ಸರ್ಕಾರಿ ನೌಕರರಿಗೆ ಇಲ್ಲಿದೆ ಒಂದು ಶುಭ ಸುದ್ದಿ. ತುಟ್ಟಿಭತ್ಯೆ (ಡಿ.ಎ.)ಹಾಗೂ ಪಿಂಚಣಿದಾರರ ತುಟ್ಟಿಪರಿಹಾರ (ಡಿ.ಆರ್‌.)ವನ್ನು ಹೆಚ್ಚುವರಿಯಾಗಿ ಶೇ.2ರಷ್ಟುಏರಿಸಲು ಸಂಪುಟ ಸಭೆ ಬುಧವಾರ ಅನುಮೋದನೆ ನೀಡಿದೆ.

ನವದೆಹಲಿ: ಕೇಂದ್ರ ಸರ್ಕಾರಿ ನೌಕರರ ನೌಕರರ ತುಟ್ಟಿಭತ್ಯೆ (ಡಿ.ಎ.)ಹಾಗೂ ಪಿಂಚಣಿದಾರರ ತುಟ್ಟಿಪರಿಹಾರ (ಡಿ.ಆರ್‌.)ವನ್ನು ಹೆಚ್ಚುವರಿಯಾಗಿ ಶೇ.2ರಷ್ಟುಏರಿಸಲು ಸಂಪುಟ ಸಭೆ ಬುಧವಾರ ಅನುಮೋದನೆ ನೀಡಿದೆ.

ಇದರಿಂದಾಗಿ 1.1 ಕೋಟಿ ಕೇಂದ್ರ ಸರ್ಕಾರಿ ನೌಕರರು ಹಾಗೂ ಪಿಂಚಣಿದಾರರು ಪ್ರಯೋಜನ ಪಡೆಯಲಿದ್ದಾರೆ. ಮೂಲ ವೇತನ ಮತ್ತು ಪಿಂಚಣಿಯ ಮೇಲೆ ಈಗಿರುವ ಶೇ.7ರಷ್ಟುಡಿ.ಎ ಮತ್ತು ಡಿ.ಆರ್‌.ನ ಪ್ರಮಾಣವನ್ನು ಹೆಚ್ಚುವರಿಯಾಗಿ ಶೇ.2ರಷ್ಟುಏರಿಸಲು ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ. ತುಟ್ಟಿಭತ್ಯೆ ಹಾಗೂ ತುಟ್ಟಿಪರಿಹಾರಗಳು 2018ರ ಜು.1ರಿಂದ ಪೂರ್ವಾನ್ವಯ ಆಗಲಿವೆ.

ಈ ನಿರ್ಧಾರದಿಂದಾಗಿ ಕೇಂದ್ರ ಸರ್ಕಾರದ ಬೊಕ್ಕಸಕ್ಕೆ ವಾರ್ಷಿಕ 6,112 ಕೋಟಿ ರು. ಹಾಗೂ 2018​-19ನೇ ಸಾಲಿನ ಹಣಕಾಸು ವರ್ಷದಲ್ಲಿ 4,074 ಕೋಟಿ ರು. ಹೊರೆ ಬೀಳಲಿದೆ. ಈ ಏರಿಕೆಯಿಂದ 48.41 ಲಕ್ಷ ಕೇಂದ್ರ ಸರ್ಕಾರಿ ನೌಕರರು ಮತ್ತು 62.03 ಲಕ್ಷ ಪಿಂಚಣಿದಾರರಿಗೆ ಪ್ರಯೋಜನವಾಗಲಿದೆ. 7ನೇ ವೇತನ ಆಯೋಗದ ಶಿಫಾರಸಿನ ಆಧಾರದ ಮೇಲೆ ತುಟ್ಟಿಭತ್ಯೆ ಮತ್ತು ತುಟ್ಟಿಪರಿಹಾರವನ್ನು ಏರಿಕೆ ಮಾಡಲಾಗಿದೆ ಎಂದು ಅಧಿಕೃತ ಪ್ರಟಕಣೆಯಲ್ಲಿ ತಿಳಿಸಲಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

Viral Video: ಗಗನಯಾನ್‌ ಮಿಷನ್‌ ಲ್ಯಾಡಿಂಗ್‌ ಪ್ಯಾರಚೂಟ್‌ ಯಶಸ್ವಿ ಪರೀಕ್ಷೆ ನಡೆಸಿದ ಇಸ್ರೋ
ಚಾಮರಾಜನಗರದಲ್ಲಿ 5 ಹುಲಿಗಳ ಹಾವಳಿ: ರೈತರ ಆಕ್ರೋಶ, ಡ್ರೋನ್ ಶೋಧಕ್ಕೆ ಅರಣ್ಯ ಇಲಾಖೆ ಸಿದ್ಧ!