
ಬೆಂಗಳೂರು(ಮಾ.14): ರಾಜ್ಯದ ರೈತರನ್ನು ಸತತ ಬರಗಾಲ ತೀವ್ರವಾಗಿ ಬಾಧಿಸುತ್ತಿರುವ ಹಿನ್ನೆಲೆಯಲ್ಲಿ ಕೃಷಿಕರು ಪಡೆದ ಬೆಳೆಸಾಲವನ್ನು ಮನ್ನಾ ಮಾಡಲು ಭಾರಿ ಒತ್ತಡ ಎದುರಿಸುತ್ತಿರುವ ರಾಜ್ಯ ಸರ್ಕಾರ ಈ ಬಾರಿಯ ಬಜೆಟ್‌ನಲ್ಲಿ ಸಹಕಾರ ಬ್ಯಾಂಕ್‌ಗಳಲ್ಲಿ ರೈತರು ಪಡೆದ ಬೆಳೆಸಾಲವನ್ನು ತಲಾ ರೈತರ . 25 ಸಾವಿರ ರು.ಗಳಿಗೆ ಮಿತಿಗೊಳಿಸಿ ಮನ್ನಾ ಮಾಡುವ ಸಾಧ್ಯತೆ ಹೆಚ್ಚಿದೆ.
ರಾಜ್ಯದ ಪರಿಶಿಷ್ಟಜಾತಿ ಹಾಗೂ ಪರಿಶಿಷ್ಟಪಂಗಡದ ಜನರಿಗಾಗಿ ವಿಶೇಷ ಯೋಜನೆಯೊಂದನ್ನು ರಾಜ್ಯ ಘೋಷಿಸಲಿದೆ ಎಂದು ನಿರೀಕ್ಷಿಸಲಾಗುತ್ತಿದೆ. 2011ರ ಜನಗಣತಿ ಅನುಸಾರ 1.04 ಕೋಟಿ ಪರಿಶಿಷ್ಟಜಾತಿ ಮತ್ತು 42.48 ಲಕ್ಷ ಪರಿಶಿಷ್ಟಪಂಗಡದ ಜನರಿದ್ದಾರೆ. ಈ ಪೈಕಿ ಬಡತನ ರೇಖೆಗಿಂತ ಕೆಳಗಿನ ಪರಿಶಿಷ್ಟಜಾತಿಯ 4.30 ಲಕ್ಷ ಹಾಗೂ ಪರಿಶಿಷ್ಟಪಂಗಡದ 2.70 ಲಕ್ಷ ಕುಟುಂಬಗಳಿಗೆ ಉಚಿತ ವಿದ್ಯುತ್ ಯೋಜನೆ ಘೋಷಣೆಯಾಗುವ ಸಾಧ್ಯತೆ ಇದೆ. ಅಂದರೆ ಸುಮಾರು 7 ಲಕ್ಷ ದಲಿತ ಕುಟುಂಬಗಳಿಗೆ ಉಚಿತ ವಿದ್ಯುತ್ ಸಿಗಲಿದ್ದು, ಇದರಿಂದ 35 ಲಕ್ಷ ಫಲಾನುಭವಿಗಳು ಲಾಭ ಪಡೆಯಲಿದ್ದಾರೆ. ಈ ಮೂಲಕ ವಿಶೇಷವಾಗಿ ಗ್ರಾಮೀಣ ಪ್ರದೇಶದ ಕಡು ಬಡವರಾಗಿರುವ ದಲಿತ ಕುಟುಂಬಗಳಿಗೆ ಉಚಿತ ವಿದ್ಯುತ್ ನೀಡಲು ಸರ್ಕಾರ ಮುಂದಾಗಿದೆ ಎಂದೇ ಹೇಳಲಾಗುತ್ತಿದೆ.
ರಾಜ್ಯದ ರೈತರನ್ನು ಸತತ ಬರಗಾಲ ತೀವ್ರವಾಗಿ ಬಾಧಿಸುತ್ತಿರುವ ಹಿನ್ನೆಲೆಯಲ್ಲಿ ಕೃಷಿಕರು ಪಡೆದ ಬೆಳೆಸಾಲವನ್ನು ಮನ್ನಾ ಮಾಡಲು ಭಾರಿ ಒತ್ತಡ ಎದುರಿಸುತ್ತಿರುವ ರಾಜ್ಯ ಸರ್ಕಾರ ಈ ಬಾರಿಯ ಬಜೆಟ್‌ನಲ್ಲಿ ಸಹಕಾರ ಬ್ಯಾಂಕ್‌ಗಳಲ್ಲಿ ರೈತರು ಪಡೆದ ಬೆಳೆಸಾಲವನ್ನು ತಲಾ ರೈತರ . 25 ಸಾವಿರ ರು.ಗಳಿಗೆ ಮಿತಿಗೊಳಿಸಿ ಮನ್ನಾ ಮಾಡುವ ಸಾಧ್ಯತೆ ಹೆಚ್ಚಿದೆ.
ಇದಲ್ಲದೆ, ಪರಿಶಿಷ್ಟರಿಗೆ ಉಚಿತ ವಿದ್ಯುತ್ ಸೌಲಭ್ಯ, ರಾಜ್ಯದ ನಗರ ಪ್ರದೇಶಗಳಲ್ಲಿ 7 ಲಕ್ಷ ಮನೆಗಳ ನಿರ್ಮಾಣ ಮತ್ತು ಬೆಂಗಳೂರು ನಗರದ ಸಮೀಪ ಎರಡು ಉಪ ನಗರಗಳನ್ನು ನಿರ್ಮಿಸುವ ಮೂಲಕ ತಮ್ಮ ನೆಚ್ಚಿನ ಅಹಿಂದ ವರ್ಗ ಹಾಗೂ ನಗರ ಪ್ರದೇಶದ ಮತದಾರರ ನಡುವೆ ಸಮತೋಲನ ಸಾಧಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಮುಂದಾಗಿದ್ದಾರೆ. ಈ ಮೂಲಕ ಮುಂದಿನ ವಿಧಾನಸಭಾ ಚುನಾವಣೆಗೆ ಗ್ರಾಮೀಣ ಮತ್ತು ನಗರ ಪ್ರದೇಶಗಳಿಗೆ ಸಮಾನ ಆದ್ಯತೆ ಕೊಡುವುದು ಮತ್ತು ಅಹಿಂದ ಮತಗಳನ್ನು ಗಟ್ಟಿಗೊಳಿಸುವುದು ಮುಖ್ಯ ಉದ್ದೇಶವಾಗಿದೆ ಎನ್ನಲಾಗುತ್ತಿದೆ.
ಈ ಪೈಕಿ ರೈತರ ಸಾಲ ಮನ್ನಾ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಗಂಭೀರ ಚಿಂತನೆ ನಡೆಸಿದ್ದು, ಮಾ.15ರಂದು ಬಜೆಟ್‌ನಲ್ಲಿ ಬೆಳೆಸಾಲ 25 ಸಾವಿರ ರು.ಗಳವರೆಗೆ ಮನ್ನಾ ಮಾಡುವ ಸಾಧ್ಯತೆ ಹೆಚ್ಚಿದೆ ಎಂದು ಉನ್ನತ ಮೂಲಗಳು ತಿಳಿಸಿವೆ. ರಾಜ್ಯದ 23.79 ಲಕ್ಷ ಕೃಷಿಕರು 10,551.99 ಕೋಟಿ ರು.ಗಳ ಬೆಳೆಸಾಲವನ್ನು ಸಹಕಾರ ಬ್ಯಾಂಕ್‌ಗಳಿಂದ ಪಡೆದುಕೊಂಡಿದ್ದಾರೆ. ಈ ಪೈಕಿ ಪ್ರತಿಯೊಬ್ಬ ರೈತರ . 25 ಸಾವಿರವರೆಗೆ ಸಾಲದ ಅಸಲು ಮನ್ನಾ ಮಾಡಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಇದರಿಂದ ಸುಮಾರು 10 ಲಕ್ಷ ರೈತರ ಸಂಪೂರ್ಣ ಸಾಲ ಮನ್ನಾ ಆಗಲಿದ್ದು, ಉಳಿದ ರೈತರು ತಮ್ಮ ಸಾಲದ ಬಾಬತ್ತಿನಲ್ಲಿ . 25 ಸಾವಿರ ಮನ್ನಾ ಆಗುವ ಲಾಭ ಪಡೆಯಲಿದ್ದಾರೆ. ಈ ಮೂಲಕ ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ರೈತರಿಗೆ ಕೆಲಮಟ್ಟಿನ ಅನುಕೂಲ ಆಗಲಿದೆ ಎಂಬುದು ಸರ್ಕಾರದ ಉದ್ದೇಶ.
(ಕನ್ನಡಪ್ರಭ ವಾರ್ತೆ)
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.