ಡಿಸೆಂಬರ್ 27ಕ್ಕೆ ಹೊನ್ನಾಳಿಗೆ ಬಿಜೆಪಿ ನವ ಕರ್ನಾಟಕ ಯಾತ್ರೆ

Published : Nov 20, 2017, 10:38 AM ISTUpdated : Apr 11, 2018, 12:57 PM IST
ಡಿಸೆಂಬರ್ 27ಕ್ಕೆ ಹೊನ್ನಾಳಿಗೆ ಬಿಜೆಪಿ ನವ ಕರ್ನಾಟಕ ಯಾತ್ರೆ

ಸಾರಾಂಶ

ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಅವರ ನೇತೃತ್ವದಲ್ಲಿ ನಡೆಯುತ್ತಿರುವ ನವಕರ್ನಾಟಕ ಪರಿವರ್ತನಾ ಯಾತ್ರೆ ಈಗಾಗಲೇ ಅನೇಕ ಜಿಲ್ಲೆಗಳಲ್ಲಿ ಸಂಚರಿಸುತ್ತಿದ್ದು, ಡಿ.27ಕ್ಕೆ ಹೊನ್ನಾಳಿಗೆ ಆಗಮಿಸಲಿದೆ ಎಂದು ರೇಣುಕಾಚಾರ್ಯ ಹೇಳಿದರು.

ಹೊನ್ನಾಳಿ(ನ.20): ರಾಜ್ಯದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಅವರ ನೇತೃತ್ವದಲ್ಲಿ ನಡೆಯುತ್ತಿರುವ ನವಕರ್ನಾಟಕ ಪರಿವರ್ತನಾ ಯಾತ್ರೆ ಈಗಾಗಲೇ ಅನೇಕ ಜಿಲ್ಲೆಗಳಲ್ಲಿ ಸಂಚರಿಸುತ್ತಿದ್ದು, ಡಿ.27ಕ್ಕೆ ಆಗಮಿಸಲಿದೆ ಎಂದು ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಹೇಳಿದರು.

ಪಟ್ಟಣದ ನೂತನ ಪ್ರವಾಸಿ ಮಂದಿರದಲ್ಲಿ ತಾಲೂಕು ಬಿಜೆಪಿ ವತಿಯಿಂದ ನಡೆದ ಪೂರ್ವಭಾವಿ ಸಿದ್ಧತಾ ಸಭೆಯಲ್ಲಿ ಅವರು ಮಾತನಾಡಿ, ಬಿ.ಎಸ್. ಯಡಿಯೂರಪ್ಪ ಅವರು ಮುಖ್ಯಮಂತ್ರಿ ಆಗುವುದನ್ನು ಜನತೆ ಎದುರು ನೋಡುತ್ತಿದ್ದಾರೆ ಎಂದರು. ಸ್ವಚ್ಛ ಶುದ್ಧವಾದ ಪಾರದರ್ಶಕ ಆಡಳಿತ ನೀಡುತ್ತಿರುವ ಕೇಂದ್ರದ ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ಅವರ ಮಾರ್ಗದರ್ಶನದಂತೆ ಯಡಿಯೂರಪ್ಪ ಅವರ ನೇತೃತ್ವದಲ್ಲಿ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ 75 ದಿನಗಳ ಕಾಲ ಹಮ್ಮಿಕೊಂಡಿರುವ ಪರಿವರ್ತನಾ ಯಾತ್ರೆಗೆ ನ.2 ರಂದು ಬೆಂಗಳೂರಿನಲ್ಲಿ ಚಾಲನೆ ನೀಡಲಾಗಿದೆ. ಈಗಾಗಲೇ ಬೆಂಗಳೂರು ಸೇರಿದಂತೆ ಹಲವಾರು ಜಿಲ್ಲೆಗಳಲ್ಲಿ ಸಂಚರಿಸಿದ್ದು, ಸಭೆಗೆ ಸಹಸ್ರ ಸಂಖ್ಯೆಯಲ್ಲಿ ಬಿಜೆಪಿ ಕಾರ್ಯಕರ್ತರು ಆಗಮಿಸಿ ಯಾತ್ರೆಗೆ ಅಭೂತ ಪೂರ್ವ ಬೆಂಬಲ ನೀಡುತ್ತಿದ್ದಾರೆ ಎಂದರು.

ಡಿ.27 ರಂದು ಪರಿವರ್ತನಾ ಯಾತ್ರೆ ಯಡಿಯೂರಪ್ಪ ಅವರ ನೇತೃತ್ವದಲ್ಲಿ ಹೊನ್ನಾಳಿಗೆ ಆಗಮಿಸುತ್ತಿರುವ ಹಿನ್ನೆಲೆ ತಾಲೂಕು ಬಿಜೆಪಿ ಅಧ್ಯಕ್ಷ ರಾಜಪ್ಪ ಅವರ ನೇತೃತ್ವಲ್ಲಿ ಪೂರ್ವ ಸಿದ್ಧತಾ ಸಭೆ ನಡೆಸಲಾಗಿದೆ. ಕಾರ್ಯಕ್ರಮದ ಸಿದ್ಧತೆಗಾಗಿ ಹಲವು ಸಮಿತಿಗಳನ್ನು ರಚಿಸಿ ಸಭೆಯನ್ನು ಯಶಸ್ವಿಯಾಗಿ ನಡೆಸಲು ಮತ್ತು ಸಭೆಗೆ 15 ರಿಂದ 20 ಸಾವಿರ ಕಾರ್ಯಕರ್ತರನ್ನು ಸೇರಿಸಿ ಅಭೂತಪೂರ್ವ ಕಾರ್ಯಕ್ರಮ ನಡೆಸಲು ತೀರ್ಮಾನಿಸಲಾಗಿದೆ ಎಂದರು.

ತಾಲೂಕು ಬಿಜೆಪಿ ಅಧ್ಯಕ್ಷ ರಾಜಣ್ಣ ಮಾತನಾಡಿ, ತಾಲೂಕಿನಲ್ಲಿ ಪರಿವರ್ತನಾ ಯಾತ್ರೆಯನ್ನು ಯಶಸ್ವಿಯಾಗಿ ನಡೆಸಲು ತೀರ್ಮಾನಿಸಲಾಗಿದೆ. ಪಕ್ಷದ ಕಾರ್ಯಕರ್ತರು ಮುಖಂಡರು ಯಾತ್ರೆಯ ಯಶಸ್ವಿಗೆ ಶ್ರಮಿಸಬೇಕೆಂದರು. ಸಭೆಯಲ್ಲಿ ಜಿಲ್ಲಾ ಬಿಜೆಪಿ ಮುಖಂಡ ರಾಜನಹಳ್ಳಿ ಶಿವಕುಮಾರ್ ಯಾತ್ರೆಯ ರೂಪುರೇಷೆಗಳ ಬಗ್ಗೆ ಮತ್ತು ಸಭೆಯನ್ನು ವ್ಯವಸ್ಥಿತವಾಗಿ ನಡೆಸುವ ಬಗ್ಗೆ ಹಲವು ಸಲಹೆಗಳನ್ನು ನೀಡಿದರು.

ಜಿಲ್ಲಾ ಬಿಜೆಪಿ ಪ್ರ.ಕಾ. ರಾಜಶೇಖರ ನಾಗಪ್ಪ, ತಾ.ಪಂ ಉಪಾಧ್ಯಕ್ಷ ಶಿವಾನಂದ್, ಪ್ರ.ಕಾರ್ಯದರ್ಶಿಗಳಾದ ನಾಗರಾಜ್, ಕುಬೇಂದ್ರಪ್ಪ ಜಿ.ಪಂ. ಸದಸ್ಯರಾದ ಉಮಾ ರಮೇಶ್, ಸುರೇಂದ್ರ ನಾಯ್ಕ, ಕಸಬಾ ಸೊಸೈಟಿ ಅಧ್ಯಕ್ಷ ಹೋಬಳಿದಾರ್ ಬಾಬು, ಮುಖಂಡರಾದ ಎಚ್.ಬಿ. ಮೋಹನ್ ಮಹೇಂದ್ರಗೌಡ, ಟಿ.ಎಸ್. ಜಗದೀಶ್ ದಿಡ ಗೂರು, ಪಾಲಾಕ್ಷಪ್ಪ ಚಂದಣ್ಣ, ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ಸಿ.ಸಿ. ಶ್ರೀನಿವಾಸ್ ರುದ್ರೇಗೌಡ ಸೇರಿ ದಂತೆ ತಾ.ಪಂ. ಸದಸ್ಯರು ಗ್ರಾ.ಪಂ., ಪ.ಪಂ, ಎಪಿಎಂಸಿ ಕಸುಬಾ ಸೊಸೈಟಿ ಸದಸ್ಯರು ಹಾಗೂ ಅನೇಕ ಸಂಸ್ಥೆಗಳ ಪದಾಧಿಕಾರಿಗಳು, ಕಾರ್ಯಕರ್ತರು ಹಾಗೂ ಮುಖಂಡರಿದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಹಾಸನದ ತಿರುಪತಿಹಳ್ಳಿ ಬೆಟ್ಟದ ಮೇಲೆ 50ಕ್ಕೂ ಅಧಿಕ ಉಲ್ಕೆಗಳ ಸುರಿಮಳೆ!
India Latest News Live: ಪಹಲ್ಗಾಂ ಉಗ್ರ ದಾಳಿ: ಕೋರ್ಟ್‌ಗೆ 1597 ಪುಟಗಳ ಚಾರ್ಜ್‌ಶೀಟ್‌ ಸಲ್ಲಿಕೆ