ಎಸ್ಸೆಸ್ಸೆಲ್ಸಿ ಹಾಲ್‌ ಟಿಕೆಟ್‌ ಡೌನ್‌ಲೋಡ್‌, ತಿದ್ದುಪಡಿಗೆ ಅವಕಾಶ

Published : Dec 26, 2018, 10:36 AM IST
ಎಸ್ಸೆಸ್ಸೆಲ್ಸಿ ಹಾಲ್‌ ಟಿಕೆಟ್‌ ಡೌನ್‌ಲೋಡ್‌, ತಿದ್ದುಪಡಿಗೆ ಅವಕಾಶ

ಸಾರಾಂಶ

2019ನೇ ಸಾಲಿನ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆಗಳಿಗೆ ವಿದ್ಯಾರ್ಥಿಗಳ ತಾತ್ಕಾಲಿಕ ಪ್ರವೇಶ ಪತ್ರಗಳ ಡೌನ್‌ಲೋಡ್‌ ಹಾಗೂ ತಿದ್ದುಪಡಿಗೆ ಅವಕಾಶ ಕಲ್ಪಿಸಿದೆ. ಡಿ.31ರೊಳಗೆ ತಿದ್ದುಪಡಿ ಮಾಡಿದ ಮಾಹಿತಿಯನ್ನು ಅಪ್‌ಲೋಡ್‌ ಮಾಡುವಂತೆ ಸೂಚಿಸಿದೆ.

ಬೆಂಗಳೂರು :  ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯು 2019ನೇ ಸಾಲಿನ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆಗಳಿಗೆ ವಿದ್ಯಾರ್ಥಿಗಳ ತಾತ್ಕಾಲಿಕ ಪ್ರವೇಶ ಪತ್ರಗಳ ಡೌನ್‌ಲೋಡ್‌ ಹಾಗೂ ತಿದ್ದುಪಡಿಗೆ ಅವಕಾಶ ಕಲ್ಪಿಸಿದೆ.

ರಾಜ್ಯದ ಎಲ್ಲ ಸರ್ಕಾರಿ, ಖಾಸಗಿ ಅನುದಾನಿತ ಮತ್ತು ಅನುದಾನಿತ ರಹಿತ ಶಾಲೆಗಳ ಮುಖ್ಯಸ್ಥರು ತಮ್ಮ ಶಾಲೆಯ ಅಭ್ಯರ್ಥಿಗಳ ತಾತ್ಕಾಲಿಕ ಪ್ರವೇಶ ಪತ್ರಗಳನ್ನು ಡೌನ್‌ಲೋಡ್‌ ಮಾಡಿಕೊಂಡು ತಿದ್ದುಪಡಿ ಅವಶ್ಯಕತೆ ಇದ್ದಲ್ಲಿ, ಡಿ.31ರೊಳಗೆ ತಿದ್ದುಪಡಿ ಮಾಡಿದ ಮಾಹಿತಿಯನ್ನು ಅಪ್‌ಲೋಡ್‌ ಮಾಡುವಂತೆ ಸೂಚಿಸಿದೆ.

ತಾತ್ಕಾಲಿಕ ಪ್ರವೇಶ ಪತ್ರದಲ್ಲಿ ಒಂಬತ್ತು ಅಂಶಗಳನ್ನು ತಿದ್ದುಪಡಿ ಮಾಡಲು ಅವಕಾಶವಿದೆ. ಶಾಲಾ ಅಭ್ಯರ್ಥಿಗಳು, ಎಸ್‌ಎಟಿಎಸ್‌ ಸಂಖ್ಯೆ, ಖಾಸಗಿ ಅಭ್ಯರ್ಥಿಗಳ ರೆಫರೆನ್ಸ್‌ ಸಂಖ್ಯೆ, ಪುನಾರಾವರ್ತಿತ ಅಭ್ಯರ್ಥಿಗಳ ನೋಂದಣಿ ಸಂಖ್ಯೆಯನ್ನು ಅಗತ್ಯವಿದ್ದಲ್ಲಿ ತಿದ್ದುಪಡಿ ಮಾಡಬಹುದಾಗಿದೆ. ಸೂಚನೆ ನೀಡಿರುವುದನ್ನು ಹೊರತುಪಡಿಸಿ ಮಾಧ್ಯಮ, ವಿದ್ಯಾರ್ಥಿಯ ಬಗ್ಗೆ ಬದಲಾವಣೆ ಇದ್ದರೆ ಆಯಾ ಜಿಲ್ಲಾ ನೋಡಲ್‌ ಅಧಿಕಾರಿಗಳಿಗೆ ಲಿಖಿತವಾಗಿ ಮನವಿ ಸಲ್ಲಿಸುವಂತೆ ಮಂಡಳಿಯ ನಿರ್ದೇಶಕಿ ವಿ.ಸುಮಂಗಲಾ ಸೂಚನೆ ನೀಡಿದ್ದಾರೆ.

14,796 ಶಾಲೆಗಳ ಪೈಕಿ 7328 ಶಾಲೆಗಳು ಈಗಾಗಲೇ ಪ್ರವೇಶ ಪತ್ರಗಳನ್ನು ಡೌನ್‌ಲೋಡ್‌ ಮಾಡಿದ್ದು, 7458 ಶಾಲೆಗಳು ಡೌನ್‌ಲೋಡ್‌ ಬಾಕಿ ಉಳಿಸಿಕೊಂಡಿದ್ದಾರೆ. ಶಾಲಾ ಆಡಳಿತ ಮಂಡಳಿಗಳು kseesb.kar.nic.in ಈ ವೆಬ್‌ಸೈಟ್‌ಗೆ ಭೇಟಿ ಡೌನ್‌ಲೋಡ್‌ ಮಾಡಿಕೊಳ್ಳಬೇಕಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಯಾವ ರಾಜ್ಯದಲ್ಲಿ ಗರಿಷ್ಠ ಬೆಲೆಗೆ ಮಾರಾಟವಾಗುತ್ತೆ ಪೆಟ್ರೋಲ್? ಕಡಿಮೆಗೆ ಎಲ್ಲಿ ಸಿಗುತ್ತೆ?
ದಾವಣಗೆರೆ: ಶಾಸಕ ಶಾಮನೂರು ಶಿವಶಂಕರಪ್ಪ ನಿಧನಕ್ಕೆ ಕಲಾಪ ಮುಂದಕ್ಕೆ ಇದೇ ಮೊದಲು