
ಮಂಗಳೂರು (ಜ.04): ಬಿಜೆಪಿ ಕಾರ್ಯಕರ್ತ ದೀಪಕ್ ಹತ್ಯೆ ಖಂಡಿಸಿ ನಡೆಸುತ್ತಿರುವ ಪ್ರತಿಭಟನೆ ಬಿಟ್ಟು ಅಂತ್ಯಕ್ರಿಯೆಗೆ ಪೋಷಕರು, ಕುಟುಂಬಸ್ಥರು ಒಪ್ಪಿದ್ದಾರೆ.
ದಕ್ಷಿಣ ಕನ್ನಡ ಡಿಸಿ ಸಸಿಕಾಂತ್ ಸೆಂಥಿಲ್ ಕುಟುಂಬಸ್ಥರ, ಹಿಂದೂ ಸಂಘಟನೆಯ ಮುಖಂಡರ ಮನವೊಲಿಸುವಲ್ಲಿ ಯಶಸ್ವಿಯಾಗಿದ್ದಾರೆ. ದೀಪಕ್ ಮನೆ ಮುಂದೆ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಗ್ರಾಮಸ್ಥರು ದೀಪಕ್ ಮೃತದೇಹದ ಅಂತಿಮ ದರ್ಶನ ಪಡೆಯುತ್ತಿದ್ದಾರೆ. ಶಿವಾಜಿ ಕ್ಷತ್ರಿಯ ಸಂಪ್ರದಾಯದಂತೆ ಅಂತ್ಯ ಸಂಸ್ಕಾರ ನಡೆಯಲಿದೆ.
ಜನತಾ ಕಾಲೋನಿಯ ಹಿಂದೂ ರುದ್ರಭೂಮಿಯಲ್ಲಿ ಅಂತ್ಯ ಸಂಸ್ಕಾರದ ವಿಧಿ ವಿಧಾನಗಳು ನೆರವೇರಲಿದೆ. ಅಂತ್ಯಕ್ರಿಯೆಗೂ ಮುನ್ನ ನಿವಾಸದಿಂದ ಗಣೇಶಪುರದವರೆಗೆ ಶವಯಾತ್ರೆ ಮಾಡಲು ನಿರ್ಧರಿಸಲಾಗಿದೆ
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.