
ನವದೆಹಲಿ(ಜು.24): ಕಾಶ್ಮೀರ ವಿವಾದ ಸಂಬಂಧ ಅಮರಿಕ ಮಾತ್ರವಲ್ಲ, ಜಗತ್ತಿನ ಯಾವ ದೇಶದ ಮಧ್ಯಸ್ಥಿಕೆಯೂ ಭಾರತಕ್ಕೆ ಬೇಕಿಲ್ಲ ಎಂದು ಕೇಂದ್ರ ಸರ್ಕಾರ ಖಡಕ್ ಸ್ಪಷ್ಟನೆ ನೀಡಿದೆ.
ಈ ಕುರಿತು ಲೋಕಸಭೆಯಲ್ಲಿ ಮಾತನಾಡಿರುವ ರಕ್ಷಣಾ ಸಚಿವ ರಾಜನಾಥ್ ಸಿಂಗ್, ಪ್ರಧಾನಿ ಮೋದಿ ಕಾಶ್ಮೀರ ವಿಷಯದಲ್ಲಿ ಮಧ್ಯಸ್ಥಿಕೆ ವಹಿಸುವಂತೆ ಡೋನಾಲ್ಡ್ ಟ್ರಂಪ್ ಅವರನ್ನು ಕೇಳಿಲ್ಲ ಎಂದು ಸ್ಪಷ್ಟಪಡಿಸಿದರು.
ಜಿ-20 ಶೃಂಗಸಭೆ ವೇಳೆ ಮೋದಿ-ಟ್ರಂಪ್ ಭೇಟಿಯಾದಾಗ ಕಾಶ್ಮೀರ ವಿವಾದ ಬಗೆಹರಿಸುವಂತೆ ಟ್ರಂಪ್ ಅವರಲ್ಲಿ ಮೋದಿ ಮನವಿ ಮಾಡಿದ್ದಾರೆ ಎಂಬುದು ಕೇವಲ ಊಹಾಪೋಹ ಎಂದು ರಾಜನಾಥ್ ಹೇಳಿದರು.
ಕಾಶ್ಮೀರ ವಿಚಾರವಾಗಿ ಭಾರತ ಮತ್ತು ಪಾಕಿಸ್ತಾನದ ನಡುವೆ ಮಧ್ಯಸ್ಥಿಕೆ ವಹಿಸಲು ಸಿದ್ಧ ಎಂಬ ಟ್ರಂಪ್ ಹೇಳಿಕೆ ಭಾರತದಲ್ಲಿ ವಿವಾದ ಸೃಷ್ಟಿ ಮಾಡಿದ್ದು, ಈ ಕುರಿತು ಪ್ರಧಾನಿ ಮೋದಿ ಖುದ್ದು ಸ್ಪಷ್ಟನೆ ನೀಡಬೇಕು ಎಂದು ಪ್ರತಿಪಕ್ಷಗಳು ಪಟ್ಟು ಹಿಡಿದಿವೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.