
ನವದೆಹಲಿ (ಡಿ. 25): ರಾಜಧಾನಿ ನವದೆಹಲಿಯಲ್ಲಿ ವಾಯುಗುಣಮಟ್ಟ ಸತತ ಮೂರನೇ ದಿನವಾದ ಸೋಮವಾರ ಕೂಡಾ ತೀರಾ ಹದಗೆಟ್ಟ ಸ್ಥಿತಿಯಲ್ಲೇ ಮುಂದುವರೆದ ಕಾರಣ, ತಕ್ಷಣದಿಂದ ಜಾರಿಗೆ ಬರುವಂತೆ 3 ದಿನಗಳ ಕಾಲ ನಗರದಲ್ಲಿ ಎಲ್ಲಾ ರೀತಿಯ ಕೈಗಾರಿಕೆಗಳು ಮತ್ತು ನಿರ್ಮಾಣ ಚಟುವಟಿಕೆಗಳ ಮೇಲೆ ನಿಷೇಧ ಹೇರಲಾಗಿದೆ.
ದೀಪಾವಳಿ ನಂತರದ ಪ್ರಸಕ್ತ ಅತ್ಯಂತ ಹೆಚ್ಚಿನ ವಾಯು ಮಾಲಿನ್ಯ ದಾಖಲಾಗಿದ್ದು, ಈ ತುರ್ತು ಕ್ರಮಗಳ ಜಾರಿಗೆ ಸುಪ್ರೀಂ ಕೋರ್ಟ್‌ನಿಂದ ನೇಮಕವಾದ ಪರಿಸರ ಮಾಲಿನ್ಯ ನಿಯಂತ್ರಣ ಪ್ರಾಧಿಕಾರ (ಇಪಿಸಿಎ)ಕ್ಕೆ ಕೇಂದ್ರೀಯ ಮಾಲಿನ್ಯ ನಿಯಂತ್ರಣ ಮಂಡಳಿ(ಸಿಪಿಸಿಬಿ) ಶಿಫಾರಸು ಮಾಡಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.