ಮತದಾನಕ್ಕೆ ಅಡ್ಡಿ ಆರೋಪ: ಆಪ್ ಶಾಸಕನಿಗೆ ಜೈಲು ಶಿಕ್ಷೆ!

Published : Jun 25, 2019, 05:02 PM IST
ಮತದಾನಕ್ಕೆ ಅಡ್ಡಿ ಆರೋಪ: ಆಪ್ ಶಾಸಕನಿಗೆ ಜೈಲು ಶಿಕ್ಷೆ!

ಸಾರಾಂಶ

ಮತದಾನಕ್ಕೆ ಅಡ್ಡಿಪಡಿಸಿ ಜೈಲು ಪಾಲಾದ ಆಪ್ ಶಾಸಕ| ಆಪ್ ಶಾಸಕನಿಗೆ ಮೂರು ತಿಂಗಳ ಜೈಲು ಶಿಕ್ಷೆ| ಆಪ್ ಶಾಸಕ ,ಮೋಜ್ ಕುಮಾರ್ ಜೈಲು ಪಾಲು| 2013ರ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ನಡೆದಿದ್ದ ಘಟನೆ| ದೆಹಲಿಯ ಕಲ್ಯಾಣ್ ಪುರಿ ಮತದಾನ ಕೇಂದ್ರದಲ್ಲಿ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದ ಮನೋಜ್| 

ನವದೆಹಲಿ(ಜೂ.25): ಮಹತ್ವದ ಬೆಳವಣಿಗೆಯೊಂದರಲ್ಲಿ ಮತದಾನ ಪ್ರಕ್ರಿಯೆಗೆ ಅಡ್ಡಿಪಡಿಸಿದ ಆರೋಪದ ಮೇಲೆ, ಆಪ್ ಶಾಸಕನೋರ್ವನಿಗೆ ದೆಹಲಿ ಕೋರ್ಟ್ ಮೂರು ತಿಂಗಳ ಜೈಲು ಶಿಕ್ಷೆ ವಿಧಿಸಿದೆ.

ಮತದಾನ ಪ್ರಕ್ರಿಯೆಗೆ ಅಡ್ಡಿಪಡಿಸಿದ ಆರೋಪದ ಮೇಲೆ ಆಪ್ ಶಾಸಕ ಮನೋಜ್ ಕುಮಾರ್ ಅವರಿಗೆ ದೆಹಲಿ ಕೋರ್ಟ್ ತಿಂಗಳು ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.

2013ರ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಪೂರ್ವ ದೆಹಲಿಯ ಕಲ್ಯಾಣ್ ಪುರಿ ಮತದಾನ ಕೇಂದ್ರದಲ್ಲಿ, ಮತದಾನ ಪ್ರಕ್ರಿಯೆ ಹಾಗೂ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದ ಮನೋಜ್ ವಿರುದ್ಧ ಚುನಾವಣಾ ಆಯೋಗ ಕೇಸ್ ದಾಖಲಿಸಿತ್ತು.

ಪ್ರಕರಣದ ವಿಚಾರಣೆ ನಡೆಸಿದ ದೆಹಲಿ ಕೋರ್ಟ್ ನ ಹೆಚ್ಚುವರಿ ಮುಖ್ಯ ಮೆಟ್ರೋಪೊಲಿಟಿಯನ್ ಮ್ಯಾಜಿಸ್ಟ್ರೇಟ್ ಸಮರ್ ವಿಶಾಲ್, ಆರೋಪಿ ಶಾಸಕನಿಗೆ ಮೂರು ತಿಂಗಳು ಜೈಲು ಶಿಕ್ಷೆ ವಿಧಿಸಿದ್ದಾರೆ. 

ಇದೇ ವೇಳೆ 10 ಸಾವಿರ ರೂ. ಬಾಂಡ್ ಮೇಲೆ ಮನೋಜ್ ಕುಮಾರ್'ಗೆ ಕೋರ್ಟ್ ಜಾಮೀನು ಕೂಡ ಮಂಜೂರು ಮಾಡಿದೆ.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಸಾವಿನ ‘ಸಾನಿಧ್ಯ’, ಒಂದೇ ಮನೆಯಲ್ಲಿ ಐವರು ಸೂಸೈಡ್, ಒಂದೇ ರಾತ್ರಿ ನೇಣಿಗೆ ಬಿದ್ದಿದ್ಯಾಕೆ?
ನಮ್ಮನ್ನು ಗುಲಾಮರನ್ನಾಗಿಸಿ ಹಿಂದೂ ಧರ್ಮ ಸೃಷ್ಟಿಸಿದ್ದು ಬ್ರಾಹ್ಮಣರು: ನಿವೃತ್ತ ಹೈಕೋರ್ಟ್ ನ್ಯಾಯಮೂರ್ತಿ