ಮಹಿಳೆಯರಿಗೆ ಅ.29ರಿಂದ ಬಸ್ಸಲ್ಲಿ ಉಚಿತ ಪ್ರಯಾಣ

Published : Aug 16, 2019, 10:03 AM IST
ಮಹಿಳೆಯರಿಗೆ ಅ.29ರಿಂದ ಬಸ್ಸಲ್ಲಿ ಉಚಿತ ಪ್ರಯಾಣ

ಸಾರಾಂಶ

ರಕ್ಷಾ ಬಂಧನದ ಉಡುಗೊರೆಯಾಗಿ ಸರ್ಕಾರ ಭರ್ಜರಿ ಗಿಫ್ಟ್ ನೀಡಿದೆ. ಅ.29ರಿಂದ ಜಾರಿಗೆ ಬರುವಂತೆ  ಮಹಿಳೆಯರು ಸರ್ಕಾರಿ ಬಸ್‌ಗಳಲ್ಲಿ ಉಚಿತವಾಗಿ ಪ್ರಯಾಣ ಮಾಡಬಹುದು 

ನವದೆಹಲಿ [ಆ.16]: ರಕ್ಷಾ ಬಂಧನದ ದಿನವಾದ ಗುರುವಾರ ಆಮ್‌ಆದ್ಮಿ ಸರ್ಕಾರ ದೆಹಲಿಯ ಮಹಿಳೆಯರಿಗೆ ಭರ್ಜರಿ ಉಡುಗೊರೆ ಪ್ರಕಟಿಸಿದೆ.

ಅ.29ರಿಂದ ಜಾರಿಗೆ ಬರುವಂತೆ ದೆಹಲಿಯಾದ್ಯಂತ ಮಹಿಳೆಯರು ಸರ್ಕಾರಿ ಬಸ್‌ಗಳಲ್ಲಿ ಉಚಿತವಾಗಿ ಪ್ರಯಾಣ ಮಾಡಬಹುದು ಎಂದು ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ಘೋಷಿಸಿದ್ದಾರೆ. 

ಇಲ್ಲಿನ ಛತ್ರಾಸಾಲ್‌ ಸ್ಟೇಡಿಯಂನಲ್ಲಿ ಸ್ವಾತಂತ್ರ್ಯ ದಿನದ ಧ್ವಜಾರೋಹಣದ ಬಳಿಕ ಮಾತನಾಡಿದ ಕೇಜ್ರಿವಾಲ್‌ ಈ ವಿಷಯ ಪ್ರಕಟಿಸಿದರು.

ಚುನಾವಣೆ ಮೇಲೆ ಕಣ್ಣು: ಆಟೋ ಚಾಲಕರಿಗೆ ಸಿಎಂ ಭರ್ಜರಿ ಗಿಫ್ಟ್!

ಈ ಹಿಂದೆಯೇ ದೆಹಲಿಯ ಬಸ್‌ ಮತ್ತು ಮೆಟ್ರೋ ಎರಡರಲ್ಲೂ ಮಹಿಳೆಯರಿಗೆ ಉಚಿತ ಪ್ರಯಾಣದ ಆಫರ್‌ ಅನ್ನು ಕೇಜ್ರಿ ಪ್ರಕಟಿಸಿದ್ದರು. ಆದರೆ ಮೆಟ್ರೋದಲ್ಲಿ ಉಚಿತ ಪ್ರಯಾಣ ಅವಕಾಶ ಕಲ್ಪಿಸಲು ಕೇಂದ್ರ ಸರ್ಕಾರ ಇನ್ನೂ ಅನುಮತಿ ನೀಡದ ಕಾರಣ ಅದು ಬಾಕಿ ಉಳಿದುಕೊಂಡಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ದುಬಾರೆ ಶಿಬಿರದಲ್ಲಿ ಕಳೆದ 10 ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದ ತಕ್ಷ ಹೆಸರಿನ ಆನೆ ಸಾವು
ಕಾರಲ್ಲ, ಸರ್ಕಾರ ಕೆಲಸಕ್ಕೆ ಓಡಾಡಲು ಹೆಲಿಕಾಪ್ಟರ್, ವಿಮಾನ ಖರೀದಿಗೆ ಡಿಕೆಶಿ ನೇತೃತ್ವದಲ್ಲಿ ಸಭೆ