
ನವದೆಹಲಿ (ಮಾ.22): 2 ಜಿ ಹಗರಣದಲ್ಲಿ ಸಂಬಂಧ ಇತ್ತೀಚೆಗೆ ವಿಶೇಷ ನ್ಯಾಯಾಲಯ ನೀಡಿದ್ದ ತೀರ್ಪನ್ನು ಪ್ರಶ್ನಿಸಿ ಸಿಬಿಐ ಸಲ್ಲಿಸಿರುವ ಮೇಲ್ಮನವಿ ಅರ್ಜಿಯನ್ನು ವಿಚಾರಣೆಗೆ ಸ್ವೀಕರಿಸಿರುವ ದೆಹಲಿ ಹೈಕೋರ್ಟ್, ಈ ಕುರಿತು ಪ್ರತಿಕ್ರಿಯಿಸುವಂತೆ ಪ್ರಕರಣದ ಆರೋಪಿಗಳಾದ ಮಾಜಿ ಸಚಿವ ಎ.ರಾಜಾ. ಡಿಎಂಕೆ ಸಂಸದೆ ಕನಿಮೋಳಿ ಸೇರಿದಂತೆ ಇತರೆ ಹಲವರಿಗೆ ನೋಟಿಸ್ ಜಾರಿ ಮಾಡಿದೆ.
ಪ್ರಕರಣದ ಮುಂದಿನ ವಿಚಾರಣೆಯನ್ನು ಮೇ 25ಕ್ಕೆ ಮುಂದೂಡಿದೆ. ಅಲ್ಲದೆ, 2ಜಿ ಹಗರಣದ ಅಕ್ರಮ ಹಣ ವ್ಯವಹಾರ ಆರೋಪದಡಿ 223 ಕೋಟಿ ರು. ಆಸ್ತಿ ಮುಟ್ಟುಗೋಲು ಹಾಕಿಕೊಂಡಿರುವ ಜಾರಿ ನಿರ್ದೇಶನಾಲಯಕ್ಕೆ ಯಥಾಸ್ಥಿತಿ ಕಾಪಾಡಿಕೊಳ್ಳುವಂತೆ ದೆಹಲಿ ಹೈಕೋರ್ಟ್ ಹೇಳಿದೆ. 2ಜಿ ಹಗರಣ ಸಂಬಂಧ ಕಳೆದ ವರ್ಷದ ಡಿಸೆಂಬರ್ 21ರಂದು ವಿಚಾರಣೆ ನಡೆಸಿದ್ದ ವಿಶೇಷ ನ್ಯಾಯಾಲಯ, ಈ ಪ್ರಕರಣದಲ್ಲಿ ಮಾಜಿ ಸಚಿವ ಎ.ರಾಜಾ, ಡಿಎಂಕೆ ಸಂಸದೆ ಕನಿಮೋಳಿ ಮತ್ತು ಇತರರನ್ನು ಆರೋಪ ಮುಕ್ತಗೊಳಿಸಿತ್ತು. ಆದರೆ, ಜಾರಿ ನಿರ್ದೇಶನಾಲಯ ಮತ್ತು ಸಿಬಿಐ ವಿಶೇಷ ನ್ಯಾಯಾಲಯದ ತೀರ್ಪು ಪ್ರಶ್ನಿಸಿ, ದೆಹಲಿ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಸಿದ್ದವು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.