ದೆಹಲಿ ಮಾಲಿನ್ಯ: ಕೇಂದ್ರ ಹಾಗೂ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಛೀಮಾರಿ

By Suvarna Web DeskFirst Published Nov 10, 2016, 11:01 AM IST
Highlights

ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ವೋಟ್ ಬ್ಯಾಂಕ್ ರಾಜಕಾರಣದಲ್ಲಿ ಮುತುವರ್ಜಿ ವಹಿಸುತ್ತಿದ್ದು ಜನರ ಹಿತಾಸಕ್ತಿ ಬಗ್ಗೆ ಗಮನ ಹರಿಸುತ್ತಿಲ್ಲ ಎಂದು ಹೈಕೋರ್ಟ್ ಛೀಮಾರಿ ಹಾಕಿದೆ.

ನವದೆಹಲಿ (ನ.10): ದೆಹಲಿಯಲ್ಲಿ ಮಿತಿ ಮೀರುತ್ತಿರುವ ವಾಯುಮಾಲಿನ್ಯಕ್ಕೆ ಕೇಂದ್ರ ಹಾಗೂ ರಾಜ್ಯ ಸರ್ಕಾರ ಯಾವುದೇ ಕ್ರಮ ಕೈಗೊಳ್ಳದಿರುವುದು ಹೈಕೋರ್ಟ್ ಕೆಂಗಣ್ಣಿಗೆ ಗುರಿಯಾಗಿದೆ.

ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ವೋಟ್ ಬ್ಯಾಂಕ್ ರಾಜಕಾರಣದಲ್ಲಿ ಮುತುವರ್ಜಿ ವಹಿಸುತ್ತಿದ್ದು ಜನರ ಹಿತಾಸಕ್ತಿ ಬಗ್ಗೆ ಗಮನ ಹರಿಸುತ್ತಿಲ್ಲ ಎಂದು ಹೈಕೋರ್ಟ್ ಛೀಮಾರಿ ಹಾಕಿದೆ.

ಜಗತ್ತಿನಲ್ಲಿ ಮಾಲಿನ್ಯ ನಗರಿ ಪಟ್ಟಿಯಲ್ಲಿ ದೆಹಲಿ ಅಗ್ರಸ್ಥಾನದಲ್ಲಿದೆ. ಇದನ್ನು ಬಗೆಹರಿಸುವ ಕ್ರಮ ಕೈಗೊಳ್ಳುವ ಬದಲು ಸರ್ಕಾರಗಳು ರಾಜಕೀಯ ನಡೆಸುತ್ತಿದೆ. ಶೀಘ್ರದಲ್ಲಿಯೇ ಇದನ್ನು ಬಗೆಹರಿಸಬೇಕು ಎಂದಿದೆ.

click me!