ಆಗಸ್ಟ್ 2 ರಂದು ಬಂದ್

By Web Desk  |  First Published Jul 26, 2018, 9:31 AM IST

ಮಲತಾಯಿ ಧೋರಣೆಯನ್ನು ಖಂಡಿಸಿ ಆಗಸ್ಟ್ 2 ರಂದು ರಾಜ್ಯದ ವಿವಿಧೆಡೆ ಬಂದ್ ಗೆ ಕರೆ ನೀಡಲಾಗಿದೆ. ಉತ್ತರ ಕರ್ನಾಟಕ ಒಟ್ಟು 13 ಜಿಲ್ಲೆಗಳಲ್ಲಿ ಬಂದ್ ಆಚರಣೆ ಮಾಡಲಾಗುತ್ತಿದೆ.


ಹುಬ್ಬಳ್ಳಿ: ಉತ್ತರ ಕರ್ನಾಟಕಕ್ಕೆ ಆಗುತ್ತಿರುವ ಮಲತಾಯಿ ಧೋರಣೆ ಖಂಡಿಸಿ ಮತ್ತು ಪ್ರತ್ಯೇಕ ಉತ್ತರ ಕರ್ನಾಟಕ ರಾಜ್ಯ ನೀಡುವಂತೆ ಆಗ್ರಹಿಸಿ ಆ. 2ರಂದು 13  ಜಿಲ್ಲೆಗಳಲ್ಲಿ ಬಂದ್‌ಗೆ ಕರೆ ನೀಡಿರು ವುದಾಗಿ ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯ ಹೋರಾಟ ಸಮಿತಿ ತಿಳಿಸಿದೆ. 

ನಗರದಲ್ಲಿ ಬುಧವಾರ ಸುದ್ದಿಗೋಷ್ಠಿ ಯಲ್ಲಿ ಈ ಕುರಿತು ಮಾಹಿತಿ ನೀಡಿದ ಸಮಿತಿ ಅಧ್ಯಕ್ಷ ಸೋಮಶೇಖರ ಕೋತಂಬರಿ, 13 ಜಿಲ್ಲೆಗಳಾದ ಬೆಳಗಾವಿ, ಧಾರವಾಡ, ದಾವಣಗೆರೆ, ಉತ್ತರ ಕನ್ನಡ, ಕೊಪ್ಪಳ, ಬಾಗಲಕೋಟೆ, ವಿಜಯಪುರ, ಕಲಬುರಗಿ, ಬೀದರ್, ಬಳ್ಳಾರಿ, ಗದಗ, ಹಾವೇರಿ, ಯಾದಗಿರಿ ಜಿಲ್ಲೆಗಳ ಜನರು ಬೆಂಬಲ ನೀಡಬೇಕು ಎಂದು ಮನವಿ ಮಾಡಿದರು. 

Tap to resize

Latest Videos

click me!