ನಮ್ಮ ಸರ್ಕಾರ ವೋಟ್ ಬ್ಯಾಂಕ್ ಮಾಡುತ್ತಿಲ್ಲ, ಬಡವರಿಗಾಗಿ ಶ್ರಮಿಸಲಿದ್ದೇವೆ: ಮೋದಿ

Published : Jan 07, 2017, 03:55 PM ISTUpdated : Apr 11, 2018, 12:48 PM IST
ನಮ್ಮ ಸರ್ಕಾರ ವೋಟ್ ಬ್ಯಾಂಕ್ ಮಾಡುತ್ತಿಲ್ಲ, ಬಡವರಿಗಾಗಿ ಶ್ರಮಿಸಲಿದ್ದೇವೆ: ಮೋದಿ

ಸಾರಾಂಶ

ನಮ್ಮ ಸರ್ಕಾರವು ಬಡವರ ಬಗ್ಗೆ ಹೆಚ್ಚು ಗಮನ ನೀಡುತ್ತಿದ್ದು ನೋಟು ಅಮಾನ್ಯವು ದೀರ್ಘಾವಧಿಯಲ್ಲಿ ಬಡವರ ಜೀವನ ಮಟ್ಟವನ್ನು ಸುಧಾರಿಸುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ನವದೆಹಲಿ (ಜ.07): ನಮ್ಮ ಸರ್ಕಾರವು ಬಡವರ ಬಗ್ಗೆ ಹೆಚ್ಚು ಗಮನ ನೀಡುತ್ತಿದ್ದು ನೋಟು ಅಮಾನ್ಯವು ದೀರ್ಘಾವಧಿಯಲ್ಲಿ ಬಡವರ ಜೀವನ ಮಟ್ಟವನ್ನು ಸುಧಾರಿಸುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಇಲ್ಲಿ ನಡೆದ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಣಿ ಸಭೆಯಲ್ಲಿ ಪ್ರಧಾನಿ ಈ ಮಾತನ್ನು ಹೇಳಿದ್ದಾರೆ.  ಇವರು ಮಾಡಿದ 50 ನಿಮಿಷ ಭಾಷಣದಲ್ಲಿ ಬಡವರ ಸಬಲೀಕರಣಕ್ಕಾಗಿ ತಮ್ಮ ಸರ್ಕಾರ ಕೈಗೊಂಡ ಕ್ರಮಗಳ ಬಗ್ಗೆ ಒತ್ತಿ ಹೇಳಿದ್ದಾರೆ.

ಕಾರ್ಯಕಾರಣಿ ಮುಗಿದ ಬಳಿಕ ಪ್ರಧಾನಿ ಭಾಷಣವನ್ನು ಸಮೀಕರಿಸಿ ಕೇಂದ್ರ ಕಾನೂನು ಸಚಿವ ರವಿಶಂಕರ್ ಪ್ರಸಾದ್, ಚುನಾವಣೆಯಲ್ಲಿ ಗೆಲ್ಲುವುದಕ್ಕಾಗಿ ಭಾರತೀಯ ಜನತಾ ಪಕ್ಷ ಬಡವರ ಪರ ಮಾತನಾಡುತ್ತಿಲ್ಲ. ನಮ್ಮ ಪಕ್ಷವು ವೋಟ್ ಬ್ಯಾಂಕ್ ದೃಷ್ಟಿಯಲ್ಲಿ ಬಡವರನ್ನು ನೊಡುವುದಿಲ್ಲ ಎಂದು ಹೇಳಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಭಾರತ-ಬಾಂಗ್ಲಾ ರಾಜತಾಂತ್ರಿಕ ಸಮರ
ಜಿ ರಾಮ್‌ ಜಿಗೆ ರಾಜ್ಯ ಶೇ.40ರಷ್ಟು ಪಾಲು ನೀಡಲಾಗದು : ಡಿಕೆಶಿ