
ಬೆಂಗಳೂರು, (ಸೆ.19): ಕಳೆದ ಹದಿನೈದು ದಿನಗಳಿಂದ ರಾಜ್ಯ ರಾಜಕೀಯದಲ್ಲಿ ನಡೆಯುತ್ತಿರುವ ಬೆಳವಣಿಗಗಳು ದಿನದಿಂದ ದಿನಕ್ಕೆ ತೀವ್ರ ಕುತೂಹಲ ಕೆರಳಿಸುತ್ತಿದೆ.
ಇದೀಗ ಈ ರಾಜ್ಯ ರಾಜಕಾರಣದ ಬಿಕ್ಕಟ್ಟು ದೆಹಲಿಗೆ ಶಿಫ್ಟ್ ಆಗಿದೆ. ಇಂದು (ಬುಧವಾರ) ಸಂಜೆ 5ಕ್ಕೆ ಸಮನ್ವಯ ಸಮಿತಿಯ ಅಧ್ಯಕ್ಷ ಸಿದ್ದರಾಮಯ್ಯ ನೆತೃತ್ವದಲ್ಲಿ ಪರಮೇಶ್ವರ್, ದಿನೇಶ್ ಗುಂಡೂರಾವ್ ಸೇರಿದಂತೆ ಇತರೆ ರಾಜ್ಯ ನಾಯಕರು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಲಿದ್ದಾರೆ.
"
ಈ ಬಗ್ಗೆ ದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಪರಂ, ಇಂದು ರಾಹುಲ್ ಗಾಂಧಿ ಅವರ ಜೊತೆ ಪರಿಷತ್ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ, ಸಂಪುಟ ವಿಸ್ತರಣೆ, ಬಿಬಿಎಂಪಿ ಮೇಯರ್ ಚುನಾವಣೆ ಸೇರಿದಂತೆ ರಾಜ್ಯದಲ್ಲಿ ನಡೆಯುತ್ತಿರುವ ರಾಜಕೀಯ ಬೆಳವಣಿಗೆ ಕುರಿತು ಚರ್ಚೆಗಳು ಮಾಡಲಿದ್ದೇವೆ ಎಂದು ಹೇಳಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.