
ಬೆಂಗಳೂರು [ಆ.13] : ರಾಜ್ಯದಲ್ಲಿ ಬಿಜೆಪಿ ಸರ್ಕಾರ ರಚನೆಯಾಗಿ ತಿಂಗಳಾಗುತ್ತಾ ಬಂದರೂ ರಾಜ್ಯದಲ್ಲಿ ಸಚಿವ ಸಂಪುಟ ವಿಸ್ತರಣೆಯಾಗಿಲ್ಲ.
ಮುಖ್ಯಮಂತ್ರಿ ಓರ್ವರೇ ಸದ್ಯ ಅಧಿಕಾರ ನಿರ್ವಹಿಸುತ್ತಿದ್ದು, ಯಾವ ಖಾತೆಯ ನಿರ್ವಹಣೆ ಹೊಣೆಯನ್ನು ಯಾರಿಗೂ ವಹಿಸಿಲ್ಲ. ಜಿಲ್ಲೆಗಳ ಉಸ್ತುವಾರಿ ಸಚಿವರುಗಳ ನೇಮಕವೂ ಆಗಿಲ್ಲ. ಈ ನಿಟ್ಟಿನಲ್ಲಿ ಸ್ವಾತಂತ್ರ್ಯ ದಿನಾಚರಣೆ ಸಂದರ್ಭದಲ್ಲಿ ಸಚಿವರಿಂದ ಆಗಬೇಕಿದ್ದ ಧ್ವಜಾರೋಹಣ ಈ ಬಾರೀ ಜಿಲ್ಲಾಧಿಕಾರಿಗಳಿಂದಲೇ ಆಗಲಿದೆ.
ಕರ್ನಾಟಕ ಪ್ರವಾಹದ ಹೆಚ್ಚಿನ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ
ಸರ್ಕಾರದಿಂದ ಅಧಿಸೂಚನೆ ಹೊರಡಿಸಲಾಗಿದ್ದು, 2019ನೇ ಸಾಲಿನ ಸ್ವಾತಂತ್ರ್ಯ ದಿನಾಚರಣೆಯನ್ನು ಜಿಲ್ಲಾ ಕೇಂದ್ರಗಳಲ್ಲಿ ಆಯಾ ಜಿಲ್ಲೆಯ ಜಿಲ್ಲಾಧಿಕಾರಿಗಳು ಉಪ ವಿಭಾಗಗಳಲ್ಲಿ ಮತ್ತು ತಾಲೂಕುಗಳಲ್ಲಿ ತಹಶೀಲ್ದಾರರು ಧ್ವಜಾರೋಹಣ ಮಾಡಲು ಸೂಚಿಸಿದ್ದಾರೆ.
ಅಲ್ಲದೇ ಈ ಭಾರೀ ರಾಜ್ಯದಲ್ಲಿ ತೀವ್ರ ಪ್ರವಾಹ ಪರಿಸ್ಥಿತಿ ಎದುರಾಗಿದ್ದು, ಸರಳವಾಗಿ ಸ್ವಾತಂತ್ರ್ಯ ದಿನಾಚರಣೆ ಆಚರಿಸುವಂತೆ ಸೂಚನೆ ನೀಡಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.