
ನವದೆಹಲಿ(ಆ.26): ವಿವಾದಾತ್ಮಕ ಗುರು ಬಾಬಾ ರಹೀಂ ಸಿಂಗ್ ಬೆಂಗಲಿಗರಿಂದ ಪಂಜಾಬ್ ಹಾಗೂ ಹರ್ಯಾಣ ರಾಜ್ಯಗಳಲ್ಲಿ ಆಗಿರುವ ನಷ್ಟಕ್ಕೆ ಬಾಬಾ ಒಡೆತನದ ಡೇರಾ ಸಚ್ಚಾ ಸೌಧ ಸಂಸ್ಥೆಗೆ ಸೇರಿರುವ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳುವುದಾಗಿ ಎರಡೂ ಸರ್ಕಾರಗಳು ನಿರ್ಧರಿಸಿವೆ.
ಈ ಬಗ್ಗೆ ಪಂಜಾಬ್'ನ ಉನ್ನತಮಟ್ಟದ ಸಭೆಯಲ್ಲಿ ಮಾತನಾಡಿದ ಪಂಜಾಬ್ ಮುಖ್ಯಮಂತ್ರಿ ಅಮರೇಂದರ್ ಸಿಂಗ್ ' ಗಲಭೆಯಿಂದ ಪಂಜಾಬ್'ನಲ್ಲಿ ಆಗಿರುವ ನಷ್ಟವನ್ನು ಬಾಬಾ ಒಡೆತನದ ಡೇರಾ ಸಂಸ್ಥೆ ತುಂಬಿಕೊಡಲಿದೆ. ಈಗಾಗಲೇ ಪಂಜಾಬ್ ರಾಜ್ಯದಾದ್ಯಂತ ಬಿಗಿ ಭದ್ರತೆ ವಹಿಸಲಾಗಿದ್ದು, ಯಾವುದೇ ರೀತಿಯ ಪ್ರಾಣ ಹಾನಿ ಸಂಭವಿಸಿಲ್ಲ. ನಮ್ಮ ರಾಜ್ಯದ ಭದ್ರತಾ ಪಡೆಗಳು ಸೂಕ್ತ ಮುನ್ನಚ್ಚರಿಕೆ ವಹಿಸಿರುವುದಕ್ಕೆ ನಾನೂ ಆಭಾರಿಯಾಗಿದ್ದಾನೆ. ಪರಿಸ್ಥಿತಿ ಮಿತಿಮೀರಲು ನನ್ನ ರಾಜ್ಯದಲ್ಲಿ ಬಿಡುವುದಿಲ್ಲ ಎಂದು ತಿಳಿಸಿದ್ದಾರೆ.
ಈ ನಡುವೆ ಗುರುಮೀತ್ ರಾಮ್ ರಹೀಂ ಸಿಂಗ್'ನನ್ನು ಪಂಚ್'ಕುಲಾ ಜಿಲ್ಲೆಯಲ್ಲಿ ವಿಶೇಷ ಸಿಬಿಐ ನ್ಯಾಯಾಲಯ ವಶಕ್ಕೆ ಪಡೆಯಲಾಗಿದೆ. ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್, ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್, ಐಬಿ ಹಾಗೂ ವಿವಿಧ ಸೇನಾ ಮುಖ್ಯಸ್ಥರೊಂದಿಗೆ ತಮ್ಮ ನಿವಾಸದಲ್ಲಿ ಉನ್ನತ ಮಟ್ಟದ ಸಭೆ ನಡೆಸಿದ್ದು, ಪರಿಸ್ಥಿತಿ ಎರಡೂ ರಾಜ್ಯಗಳಲ್ಲಿ ನಿಯಂತ್ರಣದಲ್ಲಿದೆ ಎಂದು ತಿಳಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.