20 ವರ್ಷಗಳ ನಂತರ ಮೊದಲ ಬಾರಿಗೆ ಗೌಡರು ಸರ್ವಪಕ್ಷ ಸಭೆಯಲ್ಲಿ ಭಾಗಿ

Published : Sep 21, 2016, 12:56 PM ISTUpdated : Apr 11, 2018, 01:08 PM IST
20 ವರ್ಷಗಳ ನಂತರ ಮೊದಲ ಬಾರಿಗೆ ಗೌಡರು ಸರ್ವಪಕ್ಷ ಸಭೆಯಲ್ಲಿ ಭಾಗಿ

ಸಾರಾಂಶ

ಬೆಂಗಳೂರು(ಸೆ.21): ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ರಾಷ್ಟ್ರಧ್ಯಕ್ಷ ಹೆಚ್.ಡಿ. ದೇವೇಗೌಡರು 20 ವರ್ಷದ ನಂತರ ಸರ್ವಪಕ್ಷ ಸಭೆಯಲ್ಲಿ ಭಾಗಿಯಾಗುತ್ತಿದ್ದಾರೆ. 1996ರ ನಂತರ ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿದ ನಂತರ ಮೊದಲ ಬಾರಿ ಪಾಲ್ಗೊಳ್ಳುತ್ತಿದ್ದಾರೆ.

ಮುಖ್ಯಮಂತ್ರಿ ಭೇಟಿ ನಂತರ ಮಾತನಾಡಿದ ದೇವೇಗೌಡರು, '1996 ರಲ್ಲಿ ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿದ ಬಳಿಕ ಮೊದಲ ಬಾರಿ ಸರ್ವಪಕ್ಷ ಸಭೆಯಲ್ಲಿ ಭಾಗಿಯಾಗುತ್ತಿದ್ದೇನೆ. ನನ್ನ ಸಲಹೆಗಳನ್ನು ಸಭೆ ಮುಂದೆ ನೀಡುತ್ತೇನೆ. ಸಿ.ಎಂ ಅವರು ಭೇಟಿಯಾಗಿ ಸರ್ವ'ಪಕ್ಷ ಸಭೆಗೆ ಬರಬೇಕೆಂದು ಹೇಳಿದರು. ಈ ಹಿನ್ನೆಲೆಯಲ್ಲಿ  ಸಭೆಗೆ ಹೋಗುತ್ತಿದ್ದೇನೆ.ಎಲ್ಲರೂ ಕಾವೇರಿ ವಿಚಾರದಲ್ಲಿ ಒಗ್ಗಟ್ಟು ಪ್ರದರ್ಶಿಸುವುದಕ್ಕೆ ಹೇಳಿದ್ದೇನೆ. ಐಕ್ಯತೆಗೆ ಸಂದೇಶ ರವಾನಿಸುವ ಸಲುವಾಗಿ ಸಭೆಗೆ ಹೋಗುತ್ತಿದ್ದೇನೆ' ಎಂದರು.

‘ತಮಿಳುನಾಡಿಗೆ ಕಾವೇರಿ ನೀರು ಬಿಡಬೇಡಿ,ಯಾವುದೇ ಪರಿಣಾಮ ಎದುರಿಸಲು ಸಜ್ಜಾಗಿರಿ. ಸರ್ಕಾರದ ವಿರುದ್ಧ ಕೋರ್ಟ್​ ಯಾವುದೇ ಕ್ರಮ ಕೈಗೊಳ್ಳಬಹುದು' ಎಂದು ಮುಖ್ಯಮಂತ್ರಿಯವರಿಗೆ ಸಲಹೆ ನೀಡಿದ್ದೇನೆ.ಸುಪ್ರೀಂಕೋರ್ಟ್ ಆದೇಶ

 ಸೇರಿ ಹಲವು ವಿಚಾರಗಳ ಬಗ್ಗೆ ಚರ್ಚೆ ನಡೆಸಲಾಗಿದೆ' ಎಂದು ತಿಳಿಸಿದರು

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
ಜಾಗತಿಕ ಶಾಂತಿ-ಸೌಹಾರ್ದತೆಗೆ ಧ್ಯಾನವೇ ಮಾರ್ಗ: ವಿಶ್ವಸಂಸ್ಥೆಯಲ್ಲಿ ರವಿಶಂಕರ್ ಗುರೂಜಿ ಸಂದೇಶ