
ಶಿವಮೊಗ್ಗ : ಲೋಕಸಭಾ ಚುನಾವಣೆ ಮುಕ್ತಾಯವಾಗಿದೆ. ದೇಶದಲ್ಲಿ ಬಿಜೆಪಿ ತಿ ಹೆಚ್ಚಿನ ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ. ಬಿಜೆಪಿ ಗೆಲುವಿಗೆ ಮೋದಿ ಅಲೆ ಕಾರಣ ಎಂದು ಶಿವಮೊಗ್ಗ ಬಿಜೆಪಿ ಜಿಲ್ಲಾಧ್ಯಕ್ಷ ರುದ್ರೇಗೌಡ ಹೇಳಿದ್ದಾರೆ.
ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರದ ಹಣ ಹಂಚಿಕೆ, ಜಾತಿ ರಾಜಕಾರಣವನ್ನು ಜನ ತಿರಸ್ಕರಿಸಿದ್ದಾರೆ. ಇದರಿಂದ ಬಿಜೆಪಿ ಅಭುತಪೂರ್ವ ಯಶಸ್ಸು ಸಾಧಿಸಿತು ಎಂದರು.
ಇನ್ನು ಸಂಸದ ಬಿ.ವೈ ರಾಘವೇಂದ್ರ ಭದ್ರಾವತಿ ವಿಐಎಸ್ ಎಲ್ ಕಾರ್ಖಾನೆಯ ಅಭಿವೃದ್ಧಿ ಮತ್ತು ಪುನಶ್ಚೇತನ ಮಾಡುವ ಚಿಂತನೆ ಹೊಂದಿದ್ದಾರೆ. ಉಪ ಚುನಾವಣೆ ನಂತರ ಜಿಲ್ಲೆಗೆ ರೈಲ್ವೆ ಯೋಜನೆ ತಂದಿರುವುದು. ಜಿಲ್ಲೆಯ ಎಲ್ಲಾ ಶಾಸಕರು ಒಗ್ಗೂಡಿ ಕೆಲಸ ಮಾಡಿರುವುದು ಬಿಜೆಪಿ ಗೆಲುವಿಗೆ ಕಾರಣವಾಯಿತು.
ಬಿ ವೈ ರಾಘವೇಂದ್ರ ಎರಡು ಲಕ್ಷ ಮತಗಳ ಅಂತರದಿಂದ ಗೆಲ್ಲುತ್ತಾರೆಂದು ಚುನಾವಣಾ ಪ್ರಚಾರದ ಮೊದಲ ದಿನವೇ ಹೇಳಿದ್ದಾಗಿ ರುದ್ರೇಗೌಡ ಹೇಳಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.