
ಬೆಂಗಳೂರು(ಡಿ.27): ಸಿಟಿ ಸಿವಿಲ್ ಕೋರ್ಟ್ ಆದೇಶದ ಹಿನ್ನಲೆಯಲ್ಲಿ ಅಂಜನೀಪುತ್ರ ಸಿನಿಮಾ ಪ್ರದರ್ಶನವನ್ನು ಸ್ಥಗಿತಗೊಳಿಸಬೇಕೆಂದು ಡಿಜಿಪಿ ನೀಲಮಣಿ ರಾಜು ಸೂಚನೆ ನೀಡಿದ್ದಾರೆ.
ಕೋರ್ಟ್ ಆದೇಶವನ್ನು ವಕೀಲರು ಡಿಜಿಪಿಗೆ ಸಂಜೆ ನೀಡಿದ್ದರು. ಕೋರ್ಟ್ ಆದೇಶದ ಹಿನ್ನಲೆಯಲ್ಲಿ ಕಮೀಷನರ್, ಜಿಲ್ಲಾ ಎಸ್ಪಿಗಳಿಗೆ ಡಿಜಿಪಿ ಸೂಚನೆ ನೀಡಿದ್ದಾರೆ. ಮಧ್ಯಂತರ ಆದೇಶ ಜಾರಿಗೊಳಿಸುವಂತೆ ಸೂಚನೆ ನೀಡಿದ್ದರೂ ಪ್ರದರ್ಶನ ಸ್ಥಗಿತಗೊಳಿಸದ ನಿರ್ಮಾಪಕರ ವಿರುದ್ಧ ಕೂಡ ಕೋರ್ಟ್ ಗರಂ ಆಗಿದೆ. ವಕೀಲರ ಬಗ್ಗೆ ವಿವಾದಿತ ಸಂಭಾಷಣೆಯಿರುವ ಬಗ್ಗೆ ವಕೀಲ ನಾರಾಯಣಸ್ವಾಮಿ ಸೇರಿ 5 ಮಂದಿ ವಕೀಲರು ಅರ್ಜಿ ಸಲ್ಲಿಸಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.