
ವಿಧಾನಪರಿಷತ್ ಸಭಾಪತಿ ಡಿ.ಎಚ್.ಶಂಕರಮೂರ್ತಿ ಅವರನ್ನು ತೆಲಂಗಾಣ ಅಥವಾ ಪಾಂಡಿಚೇರಿ ರಾಜ್ಯಪಾಲರನ್ನಾಗಿ ಮಾಡಲು ಬಿಜೆಪಿ ನಿರ್ಧರಿಸಿದ್ದು, ಸದ್ಯದಲ್ಲೇ ನೇಮಕ ಪ್ರಕ್ರಿಯೆ ಪೂರ್ಣವಾಗಲಿದೆ ಎಂದು ಮೂಲಗಳು ತಿಳಿಸಿವೆ.
ರಾಜ್ಯಪಾಲರನ್ನಾಗಿ ನೇಮಿಸುವ ಪ್ರಕ್ರಿಯೆಗೆ ಈಗಾಗಲೇ ಚಾಲನೆ ಸಿಕ್ಕಿದ್ದು, ಸದ್ಯದಲ್ಲೇ ಪ್ರಕ್ರಿಯೆ ಪೂರ್ಣವಾಗಲಿದೆ. ರಾಜ್ಯಪಾಲರ ನೇಮಕ ವಿಚಾರ ಈಗಾಗಲೇ ವಿಳಂಬವಾಗಿರುವ ಹಿನ್ನೆಲೆಯಲ್ಲಿ ಈಗಾಗಲೇ ಕೇಂದ್ರ ಗೃಹ ಇಲಾಖೆಯಲ್ಲಿ ಕಡತ ವಿಲೇವಾರಿಯಾಗಿದ್ದು, ಅಂತಿಮ ಆದೇಶ ಮಾತ್ರ ಬಾಕಿ ಇದೆ.
ಗೃಹ ಸಚಿವ ರಾಜನಾಥ್ ಸಿಂಗ್ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರ ಸಲಹೆಗೆ ಕಾಯುತ್ತಿದ್ದು, ನಂತರದಲ್ಲಿ ನೇಮಕ ಆದೇಶ ಹೊರ ಬೀಳಲಿದೆ ಎಂದು ಬಿಜೆಪಿ ಮೂಲಗಳು ಹೇಳಿವೆ. ಈ ಸುವರ್ಣ ನ್ಯೂಸ್ ಸೋದರ ಪತ್ರಿಕೆ ಕನ್ನಡಪ್ರಭಗೆ ಪ್ರತಿಕ್ರಿಯಿಸಿರುವ ಶಂಕಮೂರ್ತಿ ಅವರು, ಇತ್ತೀಚಿಗೆ ಪರಿಷತ್ ಪ್ರತಿಪಕ್ಷ ನಾಯಕ ಈಶ್ವರಪ್ಪ ಅವರೊಂದಿಗೆ ಕೇಂದ್ರ ಸಚಿವ ರಾಜನಾಥ್ ಸಿಂಗ್ ಅವರನ್ನು ಭೇಟಿ ಮಾಡಿದ್ದೆ. ರಾಜ್ಯಪಾಲರ ನೇಮಕ ವಿಚಾರದಲ್ಲಿ ವಿಳಂಬವಾಗುತ್ತಿರುವ ಬಗ್ಗೆ ಪ್ರಸ್ತಾಪವೂ ಆಯಿತು. ತಡವಾಗಿರುವ ಬಗ್ಗೆ ರಾಜನಾಥ್ ಸಿಂಗ್ ಬೇಸರ ವ್ಯಕ್ತಪಡಿಸಿದರು. ಅಲ್ಲದೆ ಸದ್ಯದಲ್ಲೇ ನೇಮಕ ಮಾಡುವ ಭರವಸೆ ನೀಡಿ ದ್ದಾರೆ ಎಂದರು. ನನ್ನನ್ನು ರಾಜ್ಯಪಾಲರನ್ನಾಗಿ ನೇಮಕ ಮಾಡುವ ವಿಚಾರವಾಗಿ ಸಾಕಷ್ಟುಬಾರಿ ಸುದ್ದಿಗಳು ಹರಡಿದಾಗ ನನಗೆ ಆಸಕ್ತಿ ಹೆಚ್ಚಾಗುತ್ತಿತ್ತು. ಆದರೆ ರಾಜನಾಥ ಸಿಂಗ್ ಅವರನ್ನು ಭೇಟಿ ಮಾಡಿದ ನಂತರ ಸ್ಪಷ್ಟವಾಯಿತು. ಸದ್ಯದಲ್ಲೇ ರಾಜ್ಯಪಾಲರಾಗಿ ನನ್ನನ್ನು ನೇಮಿಸುವ ಸಾಧ್ಯತೆ ಹೆಚ್ಚಾಗಿದೆ ಎಂದು ಶಂಕರಮೂರ್ತಿ ಹೇಳಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.