
ನವದೆಹಲಿ[ಜು.17]: ಇತ್ತೀಚೆಗಷ್ಟೇ ಸ್ವಚ್ಛ ಭಾರತ ಅಭಿಯಾನದಡಿ ಸಂಸತ್ತಿನ ಆವರಣದಲ್ಲಿ ಆಯೋಜಿಸಲಾಗಿದ್ದ ಸ್ವಚ್ಛತೆಯೆಡೆಗೆ ನಮ್ಮ ನಡಿಗೆ ಕಾರ್ಯಕ್ರಮದಲ್ಲಿ ಇಲ್ಲದ ಕಸ ಗುಡಿಸಿ ಸಾಮಾಜಿಕ ಮಾಧ್ಯಮಗಳಲ್ಲಿ ಟ್ರೋಲ್‌ಗೆ ಆಹಾರವಾಗಿದ್ದ ಬಿಜೆಪಿ ಸಂಸದೆ ಹೇಮಾ ಮಾಲಿನಿ ಬಗ್ಗೆ ಅವರ ಪತಿಯೇ ನಯವಾಗಿ ಕಾಲೆಳೆದಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಹೇಮಾ ಪತಿ ಹಾಗೂ ಹಿರಿಯ ಬಾಲಿವುಡ್ ನಟ ಧರ್ಮೇಂದ್ರ ಅವರು, ‘ಹೇಮಾ ತನ್ನ ಜೀವನದಲ್ಲಿ ಯಾವತ್ತಾದರೂ ಪೊರಕೆ ಹಿಡಿದಿದ್ದಾರೆಯೇ’ ಎಂದು ಪ್ರಶ್ನಿಸಿದ್ದಾರೆ. ಜೊತೆಗೆ, ‘ಹೌದು, ನನಗೂ ಆಕೆ, ಕಸ ಗುಡಿಸುವುದರಲ್ಲಿ ಅನನುಭವಿಯಂತೆ ಕಾಣುತ್ತಾಳೆ’ ಎಂದಿದ್ದಾರೆ.
ಪ್ರಧಾನಿ ಆದೇಶ ಕಣಮ್ಮಾ: ಬೆಳಗ್ಗೆ ಬಂದು ಸಂಸತ್ತು ಗುಡಿಸಿದ ಹೇಮಾ!
ಈ ಮೂಲಕ ಈಗಾಗಲೇ ಸಾಮಾಜಿಕ ಸಾಕಷ್ಟು ನಗೆ ಪಾಟಿಲಿಗೆ ಗುರಿಯಾಗಿರುವ ಬಿಜೆಪಿ ಸಂಸದೆ ಹೇಮಾ ಮಾಲಿನಿ ಅವರ ಕಾಲೆಳೆದಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.