
ಮೈಸೂರು(ಮೇ.6): ಮೀಸಲು ಅರಣ್ಯ ಪ್ರದೇಶದೊಳಗೆ ನಿರ್ಮಿಸಿದ್ದ ಗುಡಿಸಲು ತೆರವು ವಿರೋಧಿಸಿ ಭೂಮಿ ಮತ್ತು ವಸತಿಗೆ ಆಗ್ರಹಿಸಿ ದಿಡ್ಡಳ್ಳಿಯಲ್ಲಿ ನಡೆಯುತ್ತಿದ್ದ ಹೋರಾಟ ಕೊನೆಗೂ ಸುಖಾಂತ್ಯ ಕಂಡಿದೆ.
ಭಾರೀ ಪೊಲೀಸ್ ಬಂದೋಬಸ್ತಿನಲ್ಲಿ ಅರಣ್ಯ ಒತ್ತುವರಿ ತೆರವಿಗೆ ಬಂದ ಅರಣ್ಯ ಇಲಾಖೆ ಕ್ರಮ ವಿರೋಧಿಸಿ ದಿಡ್ಡಳ್ಳಿ ಆದಿವಾಸಿ ಮಹಿಳಾ ಮುಖಂಡರಾದ ಮುತ್ತಮ್ಮ ಮರವೇರಿ ಅರೆಬೆತ್ತಲೆ ಪ್ರತಿಭಟನೆ ನಡೆಸಿದರು.
ಕಳೆದ ನಾಲ್ಕೈದು ದಿನಗಳಿಂದ ತಲೆ ಎತ್ತಿದ್ದ ಗುಡಿಸಲುಗಳನ್ನು 3 ಗಂಟೆಗಳ ಕಾಲ ಕಾರ್ಯಾಚರಣೆ ನಡೆಸಿ ತೆರವುಗೊಳಿಸಿದರು. ಸ್ಥಳಕ್ಕಾಗಮಿಸಿದ ವಿರಾಜಪೇಟೆ ಕ್ಷೇತ್ರದ ಶಾಸಕ ಕೆ.ಜಿ.ಬೋಪಯ್ಯ ಮರವೇರಿದ್ದ ಮುತ್ತಮ್ಮ ಅವರ ಮನವೊಲಿಸಿದರು. ಮುತ್ತಮ್ಮರೊಂದಿಗೆ ಸೇರಿ ಪ್ರತಿಭಟನೆ ನಡೆಸ್ತಾ ಇದ್ದ ಸುಮಾರು 300ಕ್ಕೂ ಅಧಿಕ ಆದಿವಾಸಿ ಕುಟುಂಬಗಳು ಎಲ್ಲರಿಗೂ ಒಂದೆಡೆಯೇ ವಸತಿ ಕಲ್ಪಿಸಬೇಕು ಎಂದು ಆಗ್ರಹಿಸಿದರು. ಕೊನೆಗೆ ಶಾಸಕರು ಜಿಲ್ಲಾಡಳಿತವನ್ನು ಸಂಪರ್ಕಿಸಿ ಪ್ರತಿಭಟನೆ ನಡೆಸುತ್ತಿದ್ದ ಸುಮಾರು 300 ಕುಟುಂಬಗಳಿಗೆ ಸೋಮವಾರಪೇಟೆ ತಾಲೂಕಿನ ಬ್ಯಾಡಗೊಟ್ಟದಲ್ಲಿ ವಸತಿ ಕಲ್ಪಿಸುವ ಭರವಸೆ ನೀಡಿದರು. ಭರವಸೆಯ ಬಳಿಕ ಮರವೇರಿದ್ದ ಆದಿವಾಸಿ ಮುಖಂಡರಾದ ಮುತ್ತಮ್ಮ ಕೆಳಗಿಳಿದರು. ಅಷ್ಟೊತ್ತಿಗಾಗಲೇ ಜಿಲ್ಲಾಡಳಿತ ಗೊತ್ತುಪಡಿಸಿದ್ದ ಸ್ಥಳಗಳಿಗೆ ತೆರಳಲು ಗಂಟು ಮೂಟೆ ಕಟ್ಟಿ ಲಾರಿ ಏರಿದರು. ಕೊನೆಗೆ ಜಿಲ್ಲಾಡಳಿತ ಗುರುತು ಮಾಡಿರುವ ಸ್ಥಳಗಳಿಗೆ ತೆರಳಲು ಒಪ್ಪಿಗೆ ಸೂಚಿಸುವುದರ ಮೂಲಕ ದಿಡ್ಡಳ್ಳಿ ಆದಿವಾಸಿ ಜನರ ಹೋರಾಟ ಸುಖಾಂತ್ಯ ಕಂಡಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.