
ಬೆಂಗಳೂರು (ಮಾ. 29): ಚುನಾವಣೆ ಸಮೀಪಿಸುತ್ತಿದ್ದಂತೆ ಗೌಡರ ಕುಟುಂಬದಲ್ಲಿ ಅಸಮಾಧಾನ ಭುಗಿಲೆದ್ದಿದೆ. ಕುಮಾರಸ್ವಾಮಿ ಮತ್ತು ದೇವೇಗೌಡರ ಮಧ್ಯೆ ಅಸಮಾಧಾನ ಎದ್ದಿದೆ.
ಕಾಂಗ್ರೆಸ್ ಜೊತೆಗೆ ಹೊಂದಾಣಿಕೆ ಮಾಡಿಕೊಳ್ಳಿ ಅಂತಾ ಪ್ರಗತಿಪರ ಚಿಂತಕರು ಮನವಿ ಮಾಡಿದ್ದರು. ಇದರ ಬೆನ್ನಲ್ಲೇ ಕಾಂಗ್ರೆಸ್ ಜೊತೆ ಮೈತ್ರಿ ಗೆ ಸಿದ್ದ ಎಂದು ಗೌಡರು ಹೇಳಿದ್ದರು. ಇದು ಕಾರ್ಯಕರ್ತರಲ್ಲಿ ಗೊಂದಲ ಉಂಟು ಮಾಡಿತ್ತು. ಗೌಡರ ಹೇಳಿಕೆ ಮಾದ್ಯಮಗಳಲ್ಲಿ ಪ್ರಕಟವಾಗುತ್ತಿದ್ದಂತೆ ಎಚ್’ಡಿಕೆ ಕರೆ ಮಾಡಿ ಮಾತನಾಡಿದ್ದರು.
ಚುನಾವಣಾ ಹೊಸ್ತಿಲಲ್ಲಿ ಇಂತಹಾ ಹೇಳಿಕೆಗಳು ಸಲ್ಲದು ಅಂತಾ ಅಸಮಾಧಾನ ಎಚ್’ಡಿಕೆ ಅಸಮಾಧಾನ ಹೊರ ಹಾಕಿದ್ದರು. ಇದರ ಬೆನ್ನಲ್ಲೇ ತುರ್ತು ಸುದ್ದಿಗೋಷ್ಟಿ ಕರೆದು ಡ್ಯಾಮೇಜ್ ಕಂಟ್ರೋಲ್’ಗೆ ಗೌಡರು ಮುಂದಾಗಿದ್ದರು. ನಾನು ಆ ಅರ್ಥದಲ್ಲಿ ಹೇಳಿಲ್ಲ ಅಂತಾ ದೇವೇಗೌಡರು ಸಮಜಾಯಿಷಿ ನೀಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.