
ತುಮಕೂರು (ಮಾ. 23): ಜಿಲ್ಲಾ ಬಿಜೆಪಿಯಲ್ಲಿ ಮತ್ತೆ ಭಿನ್ನಮತ ಮುಂದುವರೆದಿದೆ. ಜಿಲ್ಲಾಧ್ಯಕ್ಷ ಜ್ಯೋತಿ ಗಣೇಶ್ ಹಾಗೂ ಮಾಜಿ ಸಚಿವ ಸೊಗಡು ಶಿವಣ್ಣರ ನಡುವೆ ಭಿನ್ನಮತ ಸ್ಪೋಟಗೊಂಡಿದೆ.
ಶ್ರೀದೇವಿ ವೈದ್ಯಕೀಯ ಕಾಲೇಜು ಮೈದಾನದಲ್ಲಿ ನಡೆಯುತ್ತಿದ್ದ ಬೃಹತ್ ಸಮಾವೇಶ ನನಗೆ ಆಹ್ವಾನ ನೀಡಿಲ್ಲ. ಹಾಗಾಗಿ ಸಮಾವೇಶಕ್ಕೆ ಬಂದಿಲ್ಲ ಎಂದು ಸ್ಪಷ್ಟಪಡಿಸಿದ ಸೊಗಡು ಶಿವಣ್ಣ ಹೇಳಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ, ಸಂಸದೆ ಶೋಭಾ ಕರಂದ್ಲಾಜೆ ಸೇರಿದಂತೆ ಹಲವು ಮುಖಂಡರು ಈ ಸಮಾವೇಶದಲ್ಲಿ ಭಾಗಿಯಾಗಿದ್ದಾರೆ.
ಕಳೆದ ಶನಿವಾರ ನೆಪಮಾತ್ರಕ್ಕೆ ಒಂದಾದ ಸೊಗಡು ಶಿವಣ್ಣ ಹಾಗೂ ಮಾಜಿ ಸಂಸದ ಜಿ.ಎಸ್.ಬಸವರಾಜು ವೀರಶೈವ ಸಮಾಜದ ವೇದಿಕೆಯಲ್ಲಿ ಪರಸ್ಪರ ಹಾರಹಾಕಿಕೊಂಡು ನಾವು ಒಟ್ಟಾಗಿದ್ದೇವೆ ಎಂದು ಹೇಳಿದ್ದರು. ಈಗ ಮತ್ತೆ ಒಡಕು ಮೂಡಿದೆ. ಕಾರ್ಯಕ್ರಮಕ್ಕೆ ಹಾಜರಾಗದೇ ಸೊಗಡು ಶಿವಣ್ಣ ಅಸಮಾಧಾನ ಹೊರಹಾಕಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.