
ನವದೆಹಲಿ (ಡಿ.06): ರಾಜಸ್ಥಾನ ಮುಖ್ಯಮಂತ್ರಿ ವಸುಂದರಾ ರಾಜೆ ಹಾಗೂ ಪ್ರಧಾನಿ ಮೋದಿ ನಡುವೆ ಮುಸುಕಿನ ಗುದ್ದಾಟ ನಡೆಯುತ್ತಿದೆ ಎನ್ನುವ ವಿಚಾರವನ್ನು ಸ್ವತಃ ವಸುಂದರಾ ರಾಜೆ ತಳ್ಳಿ ಹಾಕಿದ್ದು ಇವೆಲ್ಲಾ ಮಾದ್ಯಮದ ಸೃಷ್ಟಿಯಾಗಿದೆ ಎಂದು ರಾಜೆ ಹೇಳಿದ್ದಾರೆ.
2014 ರಲ್ಲಿ ನರೇಂದ್ರ ಮೋದಿ ನೇತೃತ್ವದ ಎನ್ ಡಿಎ ಸರ್ಕಾರದಲ್ಲಿ ನನ್ನ ಪುತ್ರ ದುಶ್ಯಂತ ಸಿಂಗ್ ಗೆ ಸ್ಥಾನ ಸಿಗಲಿಲ್ಲ ಎಂದು ನಾನು ಮುನಿಸಿಕೊಂಡಿದ್ದೇನೆ ಎನ್ನುವ ವರದಿ ಕಟ್ಟುಕತೆಯಾಗಿದ್ದು ಇದರಲ್ಲಿ ಯಾವುದೇ ಹುರುಳಿಲ್ಲ ಎಂದು ವಸುಂದರಾ ರಾಜೆ ಸ್ಪಷ್ಟಪಡಿಸಿದ್ದಾರೆ.
ರಾಜಸ್ಥಾನದಲ್ಲಿ ಅಭಿವೃದ್ಧಿ ಪಥದತ್ತ ಸಾಗುತ್ತಿದೆ. ಒಳ್ಳೆಯ ಬೆಳವಣಿಗೆಗಳಾದಾಗ ಮೋದಿಯವರು ಅದನ್ನು ಅಭಿನಂದಿಸಿ ಟ್ವೀಟ್ ಮಾಡುವುದನ್ನು ನೀವು ನೋಡಿರಬಹುದು. ಒಂದು ವೇಳೆ ನಮ್ಮಿಬ್ಬರ ನಡುವೆ ಭಿನ್ನಾಭಿಪ್ರಾಯವಿದ್ದರೆ ಅದನ್ನು ಬದಲಾಯಿಸಲು ನೀವು ಸಹಾಯ ಮಾಡಿ ಎಂದು ಮಾಧ್ಯಮದವರಿಗೆ ಕುಟುಕಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.