
ಕೋಲ್ಕತಾ[ನ.24]: ಅಂಡಮಾನ್- ನಿಕೋಬಾರ್‌ನಲ್ಲಿನ ಸೆಂಟಿನೆಲ್ ದ್ವೀಪದಲ್ಲಿರುವ ಆದಿವಾಸಿಗಳ ಮತಾಂತರಕ್ಕೆ ಯತ್ನಿಸಿ ಬಾಣದ ದಾಳಿಗೆ ಬಲಿಯಾದ ಅಮೆರಿಕನ್ ಮತಪ್ರಚಾರಕನ ಶವ ಸಿಗುವುದೇ ಅನುಮಾನ ಎಂದು ಹೇಳಲಾಗುತ್ತಿದೆ.
ಇದನ್ನೂ ಓದಿ: ಕಾಲಿಟ್ಟರೆ ಕೊಲ್ಲುವ ಆದಿವಾಸಿಗಳು ಎಲ್ಲೆಲ್ಲಿದ್ದಾರೆ?
ಹೊರ ಜಗತ್ತಿನ ಸಂಪರ್ಕಕ್ಕೆ ಬಾರದೇ ಪುಟ್ಟದ್ವೀಪದಲ್ಲಿ ಜೀವನ ಸಾಗಿಸುತ್ತಿರುವ ಆದಿವಾಸಿಗಳಿರುವ ಸ್ಥಳಕ್ಕೆ ಹೋಗಿ ಮತ ಪ್ರಚಾರಕ ಜಾನ್ ಅಲೆನ್ ಚಾವು ದೇಹ ತರಬೇಕು. ಆದರೆ ಅದೊಂದು ಸೂಕ್ಷ್ಮ ಪ್ರದೇಶವಾಗಿರುವುದರಿಂದ ಹಾಗೂ ಆ ದ್ವೀಪದ ಸುತ್ತಳತೆಯ 5 ಕಿ.ಮೀ. ಒಳಕ್ಕೆ ಯಾರೂ ಹೋಗಬಾರದು ಎಂಬ ನಿರ್ಬಂಧ ಇರುವುದರಿಂದ ಕಾರ್ಯಾಚರಣೆ ಅಷ್ಟುಸುಲಭವಿಲ್ಲ. ಹೋದರೂ ಆದಿವಾಸಿಗಳು ದಾಳಿ ಮಾಡುತ್ತಾರೆ. ವಿಳಂಬ ಮಾಡಿದರೆ, ತಮ್ಮದೇ ರೀತಿಯಲ್ಲಿ ಶವವನ್ನು ಅಂತ್ಯಸಂಸ್ಕಾರ ಮಾಡುತ್ತಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಇದನ್ನೂ ಓದಿ: ಬೆಚ್ಚಿ ಬೀಳಿಸಿದ ಅಂಡಮಾನಲ್ಲಿ ಆದಿವಾಸಿಗಳಿಗೆ ಬಲಿಯಾದ ಅಮೆರಿಕನ್ ಕಥೆ
ಈ ನಡುವೆ, ಮಾನವಶಾಸ್ತ್ರ ತಜ್ಞರು ಹಾಗೂ ಅಧಿಕಾರಿಗಳನ್ನೊಳಗೊಂಡ ತಂಡವನ್ನು ಸೆಂಟಿನೆಲ್ ದ್ವೀಪದ ಸಮೀಪಕ್ಕೆ ಎರಡು ದಿನ ಕರಾವಳಿ ಕಾವಲು ಪಡೆ ಹಡಗಿನಲ್ಲಿ ಕಳುಹಿಸಲಾಗಿತ್ತು. ಯಾವುದೇ ಪ್ರಯೋಜನವಾಗಿಲ್ಲ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ