ಬಜರಂಗ ದಳ ಮತ್ತು ಬಿಜೆಪಿಗೆ ISI ಹಣ: ದಿಗ್ಗಿ ಜ್ಞಾನದ ಅನಾವರಣ!

Published : Sep 01, 2019, 04:17 PM IST
ಬಜರಂಗ ದಳ ಮತ್ತು ಬಿಜೆಪಿಗೆ ISI ಹಣ: ದಿಗ್ಗಿ ಜ್ಞಾನದ ಅನಾವರಣ!

ಸಾರಾಂಶ

ಬಿಜೆಪಿ ಹಾಗೂ ಬಜರಂಗದಳಕ್ಕೆ ಐಎಸ್ಐ ನೆರವು| ಕಾಂಗ್ರೆಸ್ ಹಿರಿಯ ನಾಯಕ ದಿಗ್ವಿಜಯ್ ಸಿಂಗ್ ಗಂಭೀರ ಆರೋಪ| ‘ಮುಸ್ಲಿಮರಿಗಿಂತ ಮುಸ್ಲಿಮೇತರರು ಪಾಕಿಸ್ತಾನದ ಐಎಸ್ಐಗೆ ಸಹಾಯ ಮಾಡುತ್ತಿದ್ದಾರೆ’|ದಿಗ್ವಿಜಯ್ ಹೇಳಿಕೆಗೆ ಎಲ್ಲೆಡೆ ಭಾರೀ ವಿರೋಧ| ತಮ್ಮ ಹೇಳಿಕೆಗೆ ಸ್ಪಷ್ಟೀಕರಣ ನೀಡಿದ ದಿಗ್ವಿಜಯ್ ಸಿಂಗ್|

ಭಿಂಡ್(ಸೆ.01): ಪಾಕಿಸ್ತಾನದ ಬೇಹುಗಾರಿಕಾ ಸಂಸ್ಥೆ ಐಎಸ್ಐನಿಂದ ಬಿಜೆಪಿ ಹಾಗೂ ಬಜರಂಗ ದಳ ಹಣ ಪಡೆಯುತ್ತಿದೆ ಎಂದು ಕಾಂಗ್ರೆಸ್ ಹಿರಿಯ ನಾಯಕ ದಿಗ್ವಿಜಯ್ ಸಿಂಗ್ ಗಂಭೀರ ಆರೋಪ ಮಾಡಿದ್ದಾರೆ.

ಮಧ್ಯಪ್ರದೇಶದ ಭಿಂಡ್’ನಲ್ಲಿ ಮಹಾರಾಣ ಪ್ರತಾಪ್ ಪ್ರತಿಮೆ ಅನಾವರಣಗೊಳಿಸಿ ಮಾತನಾಡಿದ ದಿಗ್ವಿಜಯ್, ಭಾರತದಲ್ಲಿ ಅಶಾಂತಿಯ ವಾತಾವರಣ ನಿರ್ಮಿಸಲು ಬಿಜೆಪಿ ಹಾಗೂ ಬಜರಂಗ ದಳಕ್ಕೆ ಐಎಸ್ಐ ಹಣಕಾಸಿನ ನೆರವು ನೀಡುತ್ತಿದೆ ಎಂದು ಹೇಳುವ ಮೂಲಕ ಅಚ್ಚರಿ ಮೂಡಿಸಿದ್ದಾರೆ.

ಮುಸ್ಲಿಮರಿಗಿಂತ ಮುಸ್ಲಿಮೇತರರು ಪಾಕಿಸ್ತಾನದ ಐಎಸ್ಐಗೆ ಸಹಾಯ ಮಾಡುತ್ತಿದ್ದಾರೆ. ಬಿಜೆಪಿ ಪಾಕಿಸ್ತಾನದ ಸಂಸ್ಥೆ ಐಎಸ್ಐನಿಂದ ಹಣ ಪಡೆಯುತ್ತಿದೆ. ಇದನ್ನೂ ಎಲ್ಲರೂ ಅರ್ಥಮಾಡಿಕೊಳ್ಳಬೇಕು ಎಂದು ದಿಗ್ವಿಜಯ್ ಹೇಳಿದ್ದಾರೆ. 

ದಿಗ್ವಿಜಯ್ ಸಿಂಗ್ ಅವರು ನೀಡಿರುವ ಈ ಹೇಳಿಕೆಯ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಸಾಕಷ್ಟು ವಿರೋಧ ವ್ಯಕ್ತವಾಗಿದೆ.

ಇನ್ನು ತಮ್ಮ ಹೇಳಿಕೆಗೆ ವಿರೋಧ ವ್ಯಕ್ತವಾಗುತ್ತಿದ್ದಂತೇ ಉಲ್ಟಾ ಹೊಡೆದಿರುವ ದಿಗ್ಗಿ, ತಮ್ಮ ಹೇಳಿಕೆಯನ್ನು ಮಾಧ್ಯಮಗಳು ತಪ್ಪಾಗಿ ಅರ್ಥೈಸಿವೆ ಎಂದು ಹರಿಹಾಯಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಹೊಸ ವರ್ಷದ ಆರಂಭದಲ್ಲೇ ಮಾರುಕಟ್ಟೆಗೆ ಎಂಟ್ರಿ ನೀಡಲಿದೆ ರೆಡ್ಮಿ ಮಾಸ್ಟರ್‌ ಪಿಕ್ಸೆಲ್‌ ಫೋನ್‌, ಬೆಲೆ ಎಷ್ಟು ಕಡಿಮೆ ಗೊತ್ತಾ?
ರೈಲ್ವೆ ಪ್ರಯಾಣ, ಟಿಕೆಟ್​ ಬುಕಿಂಗ್​ ಎಲ್ಲವೂ ಬಲು ಸುಲಭ : ಸಂಪೂರ್ಣ ಮಾಹಿತಿ ಈ ಒಂದೇ ಒಂದು ಆ್ಯಪ್​ನಲ್ಲಿ!