
ಬೆಂಗಳೂರು: ಜಯಲಲಿತಾ ಸಾವಿನ ಬಗ್ಗೆ ನ್ಯಾಯಾಂಗ ತನಿಖೆಗೆ ನಿರ್ಧರಿಸಿರುವುದು ಕುರ್ಚಿ ಉಳಿಸಿಕೊಳ್ಳುವ ತಂತ್ರ ಎಂದು ತಮಿಳುನಾಡು ಸಿಎಂ ಪಳನಿಸ್ವಾಮಿ ವಿರುದ್ಧ ಟಿ.ಟಿ.ವಿ.ದಿನಕರನ್ ಕಿಡಿಕಾರಿದ್ದಾರೆ.
ಪರಪ್ಪನ ಅಗ್ರಹಾರದ ಶಶಿಕಲಾ ಭೇಟಿಯಾಗಿ ಮಾತನಾಡಿದ ಅವರು, ಪಕ್ಷದ ಕಾರ್ಯಕರ್ತರ ಇಚ್ಛೆಗೆ ವಿರುದ್ಧವಾಗಿ ತಮಿಳುನಾಡು ಸರ್ಕಾರ ನಡೆದುಕೊಳ್ಳುತ್ತಿದೆ. ಪ್ರಾಮಾಣಿಕವಾಗಿ ತನಿಖೆ ನಡೆದರೆ ಸತ್ಯ ಹೊರಬರಲಿದೆ ಎಂದು ಟಿಟಿವಿ ದಿನಕರನ್ ಹೇಳಿದ್ದಾರೆ.
ತಮಿಳುನಾಡು ಮಾಜಿ ಮುಖ್ಯಮಂತ್ರಿ ಜಯಾಲಲಿತಾ ಸಾವಿನ ತನಿಖೆ ನಡೆಸುವುದಾಗಿ ನಿನ್ನೆ ತಮಿಳುನಾಡು ಸರ್ಕಾರ ಘೋಷಿಸಿದೆ.
ಅಮ್ಮಾ ಸಾವಿನ ತನಿಖೆಯಾಗಬೇಕೆಂದು ವ್ಯಾಪಕವಾಗಿ ಮನವಿಗಳು ಬರುತ್ತಿರುವ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ತಮಿಳುನಾಡು ಮುಖ್ಯಮಂತ್ರಿ ಪಳನಿಸ್ವಾಮಿ ಹೇಳಿದ್ದರು.
ಕಳೆದ ವರ್ಷ ಸೆಪ್ಟೆಂಬರ್ 22 ರಂದು ಚೆನ್ನೈನ ಅಪೋಲೋ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದ ಜಯಲಲಿತಾ ಚಿಕಿತ್ಸೆ ಫಲಕಾರಿಯಾಗದೆ ಡಿಸೆಂಬರ್ 5 ರಂದು ಅಕಾಲಿಕ ಹೃದಯಾಘಾತಕ್ಕೆ ತುತ್ತಾಗಿ ಮೃತಪಟ್ಟಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.