
ಉಡುಪಿ : ಪೇಜಾವರ ಮಠದ ವಿಶ್ವೇಶತೀರ್ಥರು ರಾಮಮಂದಿರ ಕಟ್ಟುವುದಾಗಿಯೂ ಹೇಳಲಿ ಅಥವಾ ಸಂವಿಧಾನವನ್ನು ಬದಲಾಯಿಸುವ ಬಗ್ಗೆಯಾದರೂ ಹೇಳಲಿ. ಅವರಿಗೆ ಅರಳು-ಮರಳಾಗಿದ್ದು, ಅವರ ಹೇಳಿಕೆಗಳನ್ನೆಲ್ಲಾ ಗಂಭೀರವಾಗಿ ತೆಗೆದುಕೊಳ್ಳಬೇಕಾದ್ದಿಲ್ಲ ಎಂದು ಚಿಂತಕ ದಿನೇಶ್ ಅಮೀನ್ ಮಟ್ಟು ಹೇಳಿದ್ದಾರೆ.
ಭಾನುವಾರ ಉಡುಪಿಯಲ್ಲಿ ಅಂಬೇಡ್ಕರ್ ಯುವಜನೋತ್ಸವ ಉದ್ಘಾಟಿಸಿದ ಅವರು, ವಯಸ್ಸಾದವರು ಒಂದೊಂದು ಸಲ ಒಂದೊಂದು ಮಾತನಾಡುತ್ತಾರೆ. ಪೇಜಾವರ ಶ್ರೀಗಳಿಗೂ ವಯಸ್ಸಾಗಿದೆ.
ಆದ್ದರಿಂದ ಅವರು ಏನು ಹೇಳಿದರೂ ಅವರನ್ನು ಕ್ಷಮಿಸಿಬಿಡೋಣ ಎಂದರು. ಹಿಂದೆ ಉಡುಪಿ ಚಲೋ ಮಾಡಿದಾಗ ಪೇಜಾವರ ಶ್ರೀಗಳ ಕೆಲವು ಶಿಷ್ಯರು ಉಡುಪಿ ಅಶುದ್ಧಿಯಾಗಿದೆ. ಆದ್ದರಿಂದ ಉಡುಪಿಯನ್ನೇ ಶುದ್ಧಿ ಮಾಡುತ್ತೇವೆ ಎಂದು ಹೊರಟಿದ್ದರು. ಪೇಜಾವರರು ಅಂತಹವರಿಗೆಲ್ಲಾ ಗುರುಗಳಾಗಿದ್ದಾರೆ ಎಂದು ಟೀಕಿಸಿದರು.
ಆದರೆ ಜವಾಬ್ದಾರಿಯುತ ಸ್ಥಾನದಲ್ಲಿರುವ ಕೇಂದ್ರ ಸಚಿವರೊಬ್ಬರು ಸಂವಿಧಾನ ಬದಲಾವಣೆ ಮಾಡುವುದಾಗಿ ಹೇಳಿದ್ದಾರೆ. ಅದಕ್ಕೆ ತಕ್ಕ ವೇದಿಕೆಯಲ್ಲಿ ತಕ್ಕ ಉತ್ತರವನ್ನು ನೀವು ನೀಡಬೇಕು ಎಂದು ಸ್ಥಳದಲ್ಲಿದ್ದವರಿಗೆ ಹೇಳಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.