ಕೆಪಿಸಿಸಿ ಅಧ್ಯಕ್ಷರಾಗಿ ದಿನೇಶ್ ಗುಂಡೂರಾವ್

First Published Jun 9, 2018, 3:51 PM IST
Highlights
  • ಕೆಪಿಸಿಸಿ ಅಧ್ಯಕ್ಷರಾಗಿ ದಿನೇಶ್ ಗುಂಡೂರಾವ್ ಬಹುತೇಕ ಖಚಿತ
  • ಜೂ. 14ರಂದು ಅಧಿಕೃತ ಆದೇಶ 
  • ಅಧ್ಯಕ್ಷ ಸ್ಥಾನದ ಮೇಲೆ ಕಣ್ಣಿಟ್ಟಿದ ಎಂ.ಬಿ.ಪಾಟೀಲರಿಗೆ ನಿರಾಸೆ
  •  

ನವದೆಹಲಿ(ಜೂ.09): ಕರ್ನಾಟಕ ಪ್ರದೇಶ ಕಾಂಗ್ರೆಸ್ ಅಧ್ಯಕ್ಷರಾಗಿ ದಿನೇಶ್ ಗುಂಡೂರಾವ್ ನೇಮಕವಾಗುವುದು ಬಹುತೇಕ ಖಚಿತವಾಗಿದೆ. 

ಇಂದು ದೆಹಲಿಯ ಕಾಂಗ್ರೆಸ್ ಮುಖ್ಯ ಕಚೇರಿಯಲ್ಲಿ ಅಧ್ಯಕ್ಷರ ಆಯ್ಕೆಯನ್ನು  ಅಂತಿಮಗೊಳಿಸಲಾಗಿದ್ದು  ಜೂ.14ರಂದು ಅಧಿಕೃತ ಪ್ರಕಟಣೆ ಹೊರಡಿಸಲಾಗುತ್ತದೆ. ಮುಂದಿನ ವರ್ಷ ನಡೆಯುವ ಲೋಕಸಭಾ ಚುನಾವಣೆ ದೃಷ್ಟಿಯಿಂದ ದಿನೇಶ್ ಗುಂಡೂರಾವ್ ಅವರನ್ನು ನೇಮಕಗೊಳಿಸಲಾಗಿದೆ. 

ಅಧ್ಯಕ್ಷ ಸ್ಥಾನದ ಮೇಲೆ ಕಣ್ಣಿಟ್ಟಿದ್ದ ಎಂ.ಬಿ. ಪಾಟೀಲ್ ಅವರಿಗೆ ಎರಡನೇ ಹಂತದಲ್ಲಿ ಸಚಿವ ಸ್ಥಾನದ ಭರವಸೆ ನೀಡಲಾಗಿದೆ. ನಿನ್ನೆ ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ಹಾಗೂ ಎಂ.ಪಿ.ಪಾಟೀಲ್ ಅವರನ್ನು ಹೈಕಮಾಂಡ್ ಕರೆಸಿಕೊಂಡಿತ್ತು. ರಾಜ್ಯದ ದೆಹಲಿ ಮಟ್ಟದ ರಾಜ್ಯ ನಾಯಕರಿಗೆ ಪಾಟೀಲರ ಮೇಲೆ ಒಲವಿದ್ದರೆ ದಿನೇಶ್ ಅವರನ್ನು ನೇಮಿಸುವಂತೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಜಿ. ಪರಮೇಶ್ವರ್ ಒತ್ತಡವೇರಿದ್ದರು.

25ನೇ ಅಧ್ಯಕ್ಷ
2016ರಿಂದ ಕೆಪಿಸಿಸಿ ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿರುವ ಗಾಂಧಿನಗರದ ಶಾಸಕ ದಿನೇಶ್ ಗುಂಡೂರಾವ್ ಕೆಪಿಸಿಸಿಯ 25ನೇ ಅಧ್ಯಕ್ಷರಾಗಲಿದ್ದಾರೆ. 

ಕರ್ನಾಟಕದ ಮಾಜಿ ಮುಖ್ಯಮಂತ್ರಿ ಆರ್.ಗುಂಡೂರಾವ್ ಅವರ ಪುತ್ರರಾದ ದಿನೇಶ್ 2004ರಿಂದ ಸತತ 4 ಬಾರಿ ಶಾಸಕರಾಗಿ ಹಾಗೂ ಸಿದ್ದರಾಮಯ್ಯ ಅಧಿಕಾರವಧಿಯಲ್ಲಿ ಆಹಾರ,ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರ ಸಚಿವರಾಗಿ ಕಾರ್ಯನಿರ್ವಹಿಸಿದ್ದಾರೆ.

click me!