
ಬೆಂಗಳೂರು: ಜೆಡಿಎಸ್ ಮತ್ತು ಕಾಂಗ್ರೆಸ್ ನೇತೃತ್ವದ ಸಮ್ಮಿಶ್ರ ಸರ್ಕಾರದ ಪ್ರಮುಖ ನಿರ್ಣಯಗಳನ್ನು ನಿರ್ಧರಿಸುವ ಸಮನ್ವಯ ಸಮಿತಿ ಹಿಗ್ಗುವ ಸಾಧ್ಯತೆಯಿದೆ. ಭಾನುವಾರವಷ್ಟೇ ಜೆಡಿಎಸ್‌ನ ನೂತನ ರಾಜ್ಯಾಧ್ಯಕ್ಷರಾಗಿ ನೇಮಕಗೊಂಡ ಎಚ್.ವಿಶ್ವನಾಥ್ ಹಾಗೂ ಇತ್ತೀಚೆಗಷ್ಟೇ ಕೆಪಿಸಿಸಿ ಅಧ್ಯಕ್ಷರಾಗಿರುವ ದಿನೇಶ್ ಗುಂಡೂರಾವ್ ಅವರಿಬ್ಬರನ್ನೂ ಸಮನ್ವಯ ಸಮಿತಿ ಸದಸ್ಯರನ್ನಾಗಿ ನೇಮಿಸುವ ನಿರೀಕ್ಷೆಯಿದೆ.
ಹಾಗಾದಲ್ಲಿ ಸಮನ್ವಯ ಸಮಿತಿ ಸದಸ್ಯರ ಸಂಖ್ಯೆ ಏಳಕ್ಕೆ ಹೆಚ್ಚಲಿದೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯ ಸಮಿತಿಯಲ್ಲಿ ಸದ್ಯಕ್ಕೆ ಕಾಂಗ್ರೆಸ್ ಕಡೆಯಿಂದ ಸಿದ್ದರಾಮಯ್ಯ, ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್, ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅವರಿದ್ದಾರೆ. ಜೆಡಿಎಸ್ ನಿಂದ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹಾಗೂ ರಾಷ್ಟ್ರೀಯ ಮಹಾಪ್ರಧಾನ ಕಾರ್ಯದರ್ಶಿ ಡಾನಿಷ್ ಅಲಿ ಇದ್ದಾರೆ.
ಕುಮಾರಸ್ವಾಮಿ ಮತ್ತು ಪರಮೇಶ್ವರ್ ಅವರಿಬ್ಬರೂ ಆಯಾ ಪಕ್ಷಗಳ ರಾಜ್ಯಾಧ್ಯಕ್ಷ ಹುದ್ದೆಯನ್ನೂ ಅಲಂಕರಿಸಿದ್ದರಿಂದ ಸಮಿತಿ ಸಂಖ್ಯೆ ಹೆಚ್ಚಿಸುವ ಅಗತ್ಯ ಕಂಡುಬಂದಿರಲಿಲ್ಲ. ಇದೀಗ ಉಭಯ ಪಕ್ಷಗಳಿಗೂ ಹೊಸ ರಾಜ್ಯಾಧ್ಯಕ್ಷರು ನೇಮಕಗೊಂಡಿರುವುದರಿಂದ ಇಬ್ಬರನ್ನೂ ಸಮನ್ವಯ ಸಮಿತಿ ಸದಸ್ಯರನ್ನಾಗಿ ಮಾಡುವ ಸಂಭವವಿದೆ ಎಂದು ಜೆಡಿಎಸ್ ಮೂಲಗಳು ತಿಳಿಸಿವೆ. ವಿಶ್ವನಾಥ್ ಅವರು ಸಮನ್ವಯ ಸಮಿತಿ ಅಧ್ಯಕ್ಷರಾಗಿರುವ ಸಿದ್ದರಾಮಯ್ಯ ಅವರ ಬದ್ಧ ರಾಜಕೀಯ ವಿರೋಧಿಯಾಗಿರುವುದರಿಂದ ಈ ಸಮಿತಿ ಸಭೆ ರಂಗು ಪಡೆದುಕೊಳ್ಳಲಿದೆ ಎನ್ನಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.