
ಬೆಂಗಳೂರು : ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿ ಸರ್ಕಾರವನ್ನು ಅಸ್ಥಿರಗೊಳಿಸಲು ಬಿಜೆಪಿ ತೀವ್ರ ಪ್ರಯತ್ನ ನಡೆಸುತ್ತಿದೆ. ಇದರ ನೇತೃತ್ವವನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ವಹಿಸಿದ್ದು, ಆಪರೇಷನ್ ಕಮಲಕ್ಕೆ ಒಳಗಾಗಲು ಕಾಂಗ್ರೆಸ್ ಶಾಸಕರಿಗೆ 50 ರಿಂದ 100 ಕೋಟಿ ರು. ವರೆಗೆ ಹಣದ ಆಮಿಷ ನೀಡಲಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಗಂಭೀರ ಆರೋಪ ಮಾಡಿದ್ದಾರೆ.
ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತ ನಾಡಿದ ಅವರು, ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಅವರ ನಿರ್ದೇಶನದ ಮೇರೆಗೆ ಶಾಸಕರಾದ ಎಸ್.ಆರ್.ವಿಶ್ವನಾಥ್ ಹಾಗೂ ಅಶ್ವತ್ಥನಾರಾಯಣ, ಸಕಲೇಶಪುರ ಟಿಕೆಟ್ ಆಕಾಂಕ್ಷಿ ಸೋಮಶೇಖರ್, ಮಾಜಿ ಶಾಸಕ ಸಿ.ಪಿ.ಯೋಗೇಶ್ವರ್ ಕಾಂಗ್ರೆಸ್ ಶಾಸಕರಿಗೆ ಆಮಿಷಗಳನ್ನು ಒಡ್ಡುತ್ತಿದ್ದಾರೆ. ಈ ಸಂಬಂಧ ನಮ್ಮ ಪಕ್ಷದ ಶಾಸಕರು ಮಾಹಿತಿ ನೀಡಿದ್ದಾರೆ.
ಈ ರೀತಿ ನೂರಾರು ಕೋಟಿ ರು. ಆಮಿಷ ಒಡ್ಡಲು ಬಿಜೆಪಿ ನಾಯಕರು ಅವಲಂಬಿಸಿರುವ ಹಣದ ಮೂಲ ಯಾವುದು ಎಂಬ ಬಗ್ಗೆ ತನಿಖೆಯಾ ಗಬೇಕು. ಹಾಗಾಗಿ ಜಾರಿ ನಿರ್ದೇಶನಾಲಯ (ಇಡಿ) ಮತ್ತು ಆದಾಯ ತೆರಿಗೆ ಇಲಾಖೆ (ಐಟಿ)ಯಲ್ಲಿ ದೂರು ನೀಡಲಾಗಿದ್ದು, ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದರು.
ಬಿಜೆಪಿಗರು ಒಡ್ಡುತ್ತಿರುವ ಆಮಿಷಗಳ ತನಿಖೆಗೆ ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ)ಕ್ಕೂ ದೂರು ನೀಡಲು ಚಿಂತನೆ ನಡೆಸಲಾಗಿದೆ. ಈ ಸಂಬಂಧ ಪಕ್ಷದ ವೇದಿಕೆಯಲ್ಲಿ ಚರ್ಚೆ ನಡೆಸಿ ಮುಂದಿನ ಕ್ರಮ ಕೈಗೊಳ್ಳ ಲಾಗುವುದು ಎಂದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.