
ಬೆಂಗಳೂರು : ನೇರ ನೇಮಕಾತಿ ಮೂಲಕ 724 ನರ್ಸ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ನಿರ್ಧರಿಸಲಾಗಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.
ಗುರುವಾರ ವಿಕಾಸಸೌಧದಲ್ಲಿ ಇಲಾಖೆಯ ಪ್ರಗತಿ ಪರಿಶೀಲನೆ ನಡೆಸಿದ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಅವರು, ಇಲಾಖೆಯ ವ್ಯಾಪ್ತಿಯ ಆಸ್ಪತ್ರೆಗಳಲ್ಲಿ ನರ್ಸ್‌ಗಳ ಕೊರತೆ ಎದುರಾಗಿದೆ. ಹೀಗಾಗಿ ಮೊದಲ ಹಂತದಲ್ಲಿ 724 ಹುದ್ದೆಗಳಿಗೆ ನರ್ಸ್‌ಗಳನ್ನು ನೇಮಕ ಮಾಡಿಕೊಳ್ಳಲು ಸಭೆಯಲ್ಲಿ ತೀರ್ಮಾನಿಸಲಾಗಿದೆ. ಶೀಘ್ರದಲ್ಲಿಯೇ ನೇಮಕಾತಿ ಆದೇಶವು ಹೊರಬೀಳಲಿದೆ ಎಂದು ಹೇಳಿದರು.
ಪ್ರಕೃತಿ ವಿಕೋಪ ಎದುರಿಸುತ್ತಿರುವ ಕೊಡಗು ಜಿಲ್ಲೆಗೆ ತುರ್ತು ಸೇವೆ ಒದಗಿಸಲು ಇಲಾಖೆಯ ವೈದ್ಯರ ತಂಡ ಸಜ್ಜಾಗಿದೆ. ಅಗತ್ಯ ಬಿದ್ದರೆ ಕಳುಹಿಸಲಾಗುವುದು. ಈಗಾಗಲೇ ವೈದ್ಯರ ತಂಡವೊಂದು ತೆರಳಿ ಕಾರ್ಯನಿರ್ವಹಿಸುತ್ತಿದೆ. ಖಾಸಗಿ ಮತ್ತು ಸರ್ಕಾರಿ ವೈದ್ಯರಿಗೆ ಸಿದ್ಧರಿರುವಂತೆ ಸೂಚಿಸಲಾಗಿದೆ. ಅಗತ್ಯ ಎನಿಸಿದಾಗ ಅವರನ್ನು ಕೊಡಗಿಗೆ ಕಳುಹಿಸಿಕೊಡಲಾಗುವುದು ಎಂದು ಅವರು ತಿಳಿಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.