ನಿತ್ಯಾನಂದ ಸ್ವಾಮೀಜಿ ಮತ್ತು ಆತನ ಶಿಷ್ಯರಾದ ಶಿವ ವಲ್ಲಭನೇನಿ, ರಾಗಿಣಿ ವಲ್ಲಭನೇನಿ, ಧನಶೇಖರ ಮತ್ತು ಜಮುನಾ ರಾಣಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.
ಬೆಂಗಳೂರು(ಮಾ.01): ಆಶ್ರಮದ ಭಕ್ತೆಯಾಗಿದ್ದ ಆರತಿರಾವ್ ಮೇಲಿನ ಅತ್ಯಾಚಾರ ಪ್ರಕರಣದ ಆರೋಪಗಳಿಂದ ಮುಕ್ತಗೊಳಿಸಲು ಕೋರಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ್ದ ರಾಮನಗರ ಜಿಲ್ಲಾ ಹಾಗೂ ಸೆಷನ್ಸ್ ನ್ಯಾಯಾಲಯದ ಆದೇಶ ಪ್ರಶ್ನಿಸಿ ಬಿಡದಿ ಧ್ಯಾನಪೀಠದ ನಿತ್ಯಾನಂದ ಸ್ವಾಮಿ ಮತ್ತವರ ಐವರು ಶಿಷ್ಯರು ಹೈಕೋರ್ಟ್ ಮೆಟ್ಟಿಲೇರಿದ್ದಾರೆ.
ನಿತ್ಯಾನಂದ ಸ್ವಾಮೀಜಿ ಮತ್ತು ಆತನ ಶಿಷ್ಯರಾದ ಶಿವ ವಲ್ಲಭನೇನಿ, ರಾಗಿಣಿ ವಲ್ಲಭನೇನಿ, ಧನಶೇಖರ ಮತ್ತು ಜಮುನಾ ರಾಣಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.
ತನಿಖೆ ನಡೆಸಿದ ಪೊಲೀಸರು, ನಮ್ಮ ವಿರುದ್ಧದ ಆರೋಪಗಳನ್ನು ದೃಢಪಡಿಸುವಂತಹ ಯಾವುದೇ ಸಾಕ್ಷ್ಯಾಧಾರ ಹಾಗೂ ದಾಖಲೆಗಳನ್ನು ಸಂಗ್ರಹಿಸಿಲ್ಲ. ಆದರೂ ನಮ್ಮ ವಿರುದ್ಧ ಅಧೀನ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದಾರೆ ಎಂದು ಅರ್ಜಿದಾರರು ದೂರಿದ್ದಾರೆ.