'ಸರ್ಕಾರವನ್ನು ಅತಂತ್ರ ಮಾಡುತ್ತಿರುವ ಸಿದ್ದು ಅಮಾನತು ಮಾಡಿ'

Published : May 12, 2019, 09:18 AM ISTUpdated : May 12, 2019, 09:19 AM IST
'ಸರ್ಕಾರವನ್ನು ಅತಂತ್ರ ಮಾಡುತ್ತಿರುವ ಸಿದ್ದು ಅಮಾನತು ಮಾಡಿ'

ಸಾರಾಂಶ

ಸರ್ಕಾರವನ್ನು ಅತಂತ್ರ ಮಾಡುತ್ತಿರುವ ಸಿದ್ದು ಅಮಾನತು ಮಾಡಿ ಹಾಗೂ ಅವರ ಚೇಲಾ ಶಾಸಕರನ್ನು ಅಮಾನತು ಮಾಡಿ| ಕೆಪಿಸಿಸಿ ಅಧ್ಯಕ್ಷರಿಗೆ ಬಿಜೆಪಿ ನಾಯಕನ ಸವಾಲು

ಶಿವಮೊಗ್ಗ[ಮೇ.12]: ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್‌ಗೆ ತಾಕತ್ತಿದ್ದರೆ ರಾಜ್ಯದಲ್ಲಿನ ಸಮ್ಮಿಶ್ರ ಸರ್ಕಾರವನ್ನು ಅತಂತ್ರಗೊಳಿಸಲು ಪ್ರಯತ್ನಿಸುತ್ತಿರುವ ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಅವರ ಚೇಲಾ ಶಾಸಕರನ್ನು ಪಕ್ಷದಿಂದ ಅಮಾನತು ಮಾಡಲಿ ಎಂದು ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಸವಾಲು ಹಾಕಿದ್ದಾರೆ.

ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಅಧಿಕಾರದಲ್ಲಿರುವ ಸಮ್ಮಿಶ್ರ ಸರ್ಕಾರವನ್ನು ಅತಂತ್ರ ಮಾಡುವ ದಿಕ್ಕಿನಲ್ಲಿ ಕಾಂಗ್ರೆಸ್‌ನ ಕೆಲ ಶಾಸಕರುಗಳೇ ಪ್ರಯತ್ನ ನಡೆಸುತ್ತಿದ್ದಾರೆ. ಅಧಿಕಾರದ ಲಾಲಸೆಯಿಂದ ಕೆಲವರು ಅವಕಾಶವಾದಿ ರಾಜಕಾರಣ ಮಾಡುತ್ತಿದ್ದಾರೆ. ಇದು ಪ್ರಜಾತಂತ್ರ ವ್ಯವಸ್ಥೆಗೆ ಮಾಡುತ್ತಿರುವ ಅಪಮಾನ. ನಾಚಿಕೆಗೇಡಿನ ಸಂಗತಿ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇದೇ ಸಂದರ್ಭದಲ್ಲಿ ನಮಗೆ 104 ಸೀಟುಗಳಿವೆ. ಉಪ ಚುನಾವಣೆ ನಡೆಯುತ್ತಿರುವ ಎರಡು ಕ್ಷೇತ್ರದಲ್ಲಿ ನಾವು ಗೆಲ್ಲುತ್ತೇವೆ ಎಂಬ ವಿಶ್ವಾಸವನ್ನೂ ವ್ಯಕ್ತಪಡಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಬಿಟೆಕ್ ಪದವಿಯನ್ನು ಪೂರ್ಣಗೊಳಿಸಲು ಅಸಮರ್ಥರಾಗಿರುವ ವಿದ್ಯಾರ್ಥಿಗಳಿಗೆ ಹೊಸ ಯೋಜನೆ ಘೋಷಿಸಿದ ಐಐಟಿ ಮದ್ರಾಸ್‌
ದುಬೈನಲ್ಲಿ ಕುಳಿತು ಕರಾವಳಿಯಲ್ಲಿ ಕೋಮು ಭಾವನೆ ಕೆರಳಿಸುವ ಪೋಸ್ಟ್ ಹಾಕುತ್ತಿದ್ದವನ ಬಂಧಿಸಿದ ಮಂಗಳೂರು ಪೊಲೀಸರು