ಉಪಚುನಾವಣೆಯಲ್ಲಿಯೇ ಕಾಂಗ್ರೆಸ್-ಜೆಡಿಎಸ್ ಮೈತ್ರಿಯಲ್ಲಿ ಬಿರುಕು? ಮುಂದೇನು ಕಥೆ?

By Web DeskFirst Published Oct 8, 2018, 4:43 PM IST
Highlights

ಮುಂಬರುವ ಲೋಕಸಭಾ ಚುನಾವಣೆ ಮುನ್ನವೇ ರಾಜ್ಯದಲ್ಲಿ ಎದುರಾದ ಉಪಚುನಾವಣೆಯ ಮೈತ್ರಿಯಲ್ಲಿ ಮುಸುಕಿನ ಗುದ್ದಾಟಗಳು ನಡೆನಡೆದಿವೆ.

ಶಿವಮೊಗ್ಗ, (ಅ. 08): ಬಿಜೆಪಿಯನ್ನು ಅಧಿಕಾರದಿಂದ ದೂರ ಇಡಲು ರಾಜ್ಯದಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ಮಾಡಿಕೊಂಡಿರುವ ಮೈತ್ರಿಯಲ್ಲಿ ಬಿರುಕು ಕಾಣಿಸಿಕೊಂಡಿದೆ.

ಮುಂಬರುವ ಲೋಕಸಭಾ ಚುನಾವಣೆ ಮುನ್ನವೇ ರಾಜ್ಯದಲ್ಲಿ ಎದುರಾದ ಉಪಚುನಾವಣೆಯ ಮೈತ್ರಿಯಲ್ಲಿ ಮುಸುಕಿನ ಗುದ್ದಾಟಗಳು ನಡೆದಿದ್ದು. ಶಿವಮೊಗ್ಗ ಲೋಕಸಭಾ ಉಪಚುನಾವಣೆಗೆ ಮೈತ್ರಿಕೂಟ ಪಕ್ಷದ ಅಭ್ಯರ್ಥಿಗಳ ಆಯ್ಕೆಯಲ್ಲಿ ಗೊಂದಲ ಏರ್ಪಟ್ಟಿದೆ.

ಶಿವಮೊಗ್ಗ ಲೋಕಸಭಾ ಕ್ಷೇತ್ರವನ್ನು ನಮಗೆ ಬಿಟ್ಟುಕೊಡಿ ಎಂದು ಜೆಡಿಎಸ್ ಪಟ್ಟು ಹಿಡಿದಿದ್ದರೆ, ಮತ್ತೊಂದೆಡೆ ಕಾಂಗ್ರೆಸ್ ಯಾವುದೇ ಕಾರಣಕ್ಕೂ ಶಿವಮೊಗ್ಗ ಕ್ಷೇತ್ರವನ್ನು ಬಿಟ್ಟು ಕೊಡುವ ಮಾತೇ ಇಲ್ಲ ಎನ್ನುತ್ತಿದೆ. ಇದ್ರಿಂದ ಉಭಯ ನಾಯಕರ ನಡುವೆ ಹಗ್ಗ-ಜಗ್ಗಾಟ ನಡೆದಿದೆ.

ಕಾಂಗ್ರೆಸ್ ನಿಂದ ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಅವರನ್ನು ಕಣಕ್ಕಿಳಿಸಲು ತೀರ್ಮಾನಿಸಿದ್ದರೆ, ಜೆಡಿಎಸ್ ನಿಂದ ಮಧು ಬಂಗಾರ ಮತ್ತು ಗೀತಾ ಶಿವರಾಜ್ ಕುಮಾರ್ ಅವರು ಟಿಕೆಟ್ ಬೇಕೆಂದು ಪಟ್ಟು ಹಿಡಿದಿದ್ದಾರೆ.

ಈ ಹಿನ್ನೆಲೆಯಲ್ಲಿ ಶಿವಮೊಗ್ಗ ಲೋಕಸಭಾ ಉಪಚುನಾವಣೆಗೆಯೇ ಮೈತ್ರಿಯಲ್ಲಿ ಮುಸುಕಿನ ಗುದ್ದಾಟಗಳು ನಡೆದಿದ್ದು, ಉಪಚುನಾವಣೆಯಲ್ಲಿಯೇ ಹೀಗೇ ಆದ್ರೆ ಮುಂದೇನು ಕಥೆ ಎನ್ನುವುದನ್ನ ಕಾದು ನೋಡಬೇಕಿದೆ.

click me!