
ಹಾವೇರಿ(ಸೆ.02): ಹಾವೇರಿ ಕಾಂಗ್ರೆಸ್ನಲ್ಲಿ ಭಿನ್ನಮತವಿರುವುದು ಮತ್ತೊಮ್ಮೆ ಸಾಬೀತಾಗಿದೆ. ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ ಭೇಟಿ ನೀಡಿದ ವೇಳೆಯೇ ಕ್ಷುಲ್ಲಕ ಕಾರಣಕ್ಕಾಗಿ ಕಾಂಗ್ರೆಸ್ ಮುಖಂಡರಿಬ್ಬರು ಕಚ್ಚಾಡಿಕೊಂಡಿದ್ದಾರೆ.
ಎರಡು ದಿನದ ಹಿಂದೆ ಪರಮೇಶ್ವರ್ ನೇತೃತ್ವದಲ್ಲಿ ಬೂತ್ ಮಟ್ಟದ ಕಾರ್ಯಕರ್ತರ ಸಭೆ ನಡೆದಿತ್ತು. ಸಭೆಯ ನಂತ್ರ ಇಲ್ಲಿನ ಶಿವಶಕ್ತಿ ಪ್ಯಾಲೇಸ್ನಲ್ಲಿ MSIL ನಿರ್ದೇಶಕ ಮಂಜುನಾಥ್ ಮಠಪತಿ ಹಾಗೂ ಮತ್ತೊರ್ವ ಕಾಂಗ್ರೆಸ್ ಮುಖಂಡ, ಪ್ರಕಾಶ್ ಜೈನ್ ನಡುವೆ ಕೊಠಡಿಯ ಸಲುವಾಗಿ ಮಾತಿನ ಚಕಮಕಿ ನಡೆದಿದೆ.
ಗಲಾಟೆ ಕೊನೆಗೆ ಕೈ ಕೈ ಮಿಲಾಯಿಸುವ ಹಂತ ತಲುಪಿದ್ದು, ಅಲ್ಲೇ ಇದ್ದ ಇನ್ನುಳಿದ ಕಾರ್ಯಕರ್ತರು ಮದ್ಯಸ್ಥಿಕೆ ವಹಿಸಿ ಸಮಾಧಾನಪಡಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.