
ನವದೆಹಲಿ(ಡಿ.05): ಸಿಬಿಐ ನಿರ್ದೇಶಕ ಅಲೋಕ್ ವರ್ಮಾ ಹಾಗೂ ಸಿಬಿಐ ವಿಶೇಷ ನಿರ್ದೇಶಕ ರಾಕೇಶ್ ಅಸ್ಥಾನ, ಬೆಕ್ಕುಗಳ ಹಾಗೆ ಕಿತ್ತಾಡುತ್ತಿದ್ದರು ಎಂದು ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್ ಗೆ ತಿಳಿಸಿದೆ.
ದೇಶದ ಅತ್ಯುನ್ನತ ತನಿಖಾ ಸಂಸ್ಥೆಯಲ್ಲಿ ಅಸಾಮಾನ್ಯ ಪರಿಸ್ಥಿತಿ ನಿರ್ಮಾಣವಾಗಿದ್ದು, ಇದಕ್ಕೆ ಬಹುತೇಕ ಕಾರಣ ಈ ಇಬ್ಬರೂ ಅಧಿಕಾರಿಗಳ ಕಚ್ಚಾಟವೇ ಕಾರಣ ಎಂದು ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್ ಮುಂದೆ ಅಭಿಪ್ರಾಯಪಟ್ಟಿದೆ.
ಕಡ್ಡಾಯ ರಜೆಯ ಮೇಲೆ ಕಳುಹಿಸಿರುವ ಕೇಂದ್ರ ಸರ್ಕಾರದ ನಿರ್ಧಾರ ಪ್ರಶ್ನಿಸಿ ಅಲೋಕ್ ವರ್ಮಾ ಸಲ್ಲಿಸಿದ್ದ ಅರ್ಜಿಯ ವಿಚಾರಣೆ, ಅಟಾರ್ನಿ ಜನರಲ್ ಕೆ.ಕೆ ವೇಣುಗೋಪಾಲ್ ತಮ್ಮ ವಾದ ಮಂಡಿಸಿದರು. ಇಬ್ಬರು ಉನ್ನತ ಅಧಿಕಾರಿಗಳ ನಡುವಿನ ಜಗಳದಿಂದ ಸಿಬಿಐ ಗೌರವಕ್ಕೆ ಧಕ್ಕೆಯಾಗಿದೆ ಎಂದು ವೇಣುಗೋಪಾಲ್ ಹೇಳಿದ್ದಾರೆ.
ಇಬ್ಬರು ಅಧಿಕಾರಿಗಳ ಆಂತರಿಕ ಭಿನ್ನಾಭಿಪ್ರಾಯಗಳನ್ನು ಸರ್ಕಾರ ಸೂಕ್ಷ್ಮವಾಗಿ ಗಮನಿಸಿದ ನಂತರ ಅವರನ್ನು ರಜೆಯ ಮೇಲೆ ಕಳುಹಿಸಲಾಗಿದೆ. ಅವರನ್ನು ವರ್ಗಾವಣೆ ಮಾಡಿಲ್ಲ ಎಂದು ಎಜಿ ಕೇಂದ್ರ ಸರ್ಕಾರದ ನಿರ್ಧಾರವನ್ನು ಸಮರ್ಥಿಸಿಕೊಂಡರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.