13 ದಿನ ಮಂಗಳೂರು ರೈಲು ಸಂಚಾರ ರದ್ದು

By Web DeskFirst Published Aug 11, 2019, 8:29 AM IST
Highlights

ರಾಜ್ಯದಲ್ಲಿ ಭಾರೀ ಪ್ರಮಾಣದಲ್ಲಿ ಮಳೆ ಮುಂದುವರಿದಿದೆ. ಹಲವೆಡೆ ಭೂ ಕುಸಿತವಾಗಿದ್ದು 13 ದಿನ ಬೆಂಗಳೂರು - ಮಂಗಳೂರು ರೈಲು ಸಂಚಾರ ರದ್ದು ಮಾಡಲಾಗಿದೆ. 

ಬೆಂಗಳೂರು [ಆ.11]:  ಭಾರೀ ಮಳೆಯಿಂದ ಸಕಲೇಶಪುರ- ಸುಬ್ರಹ್ಮಣ್ಯ ಘಟ್ಟಪ್ರದೇಶದಲ್ಲಿ ಸತತ ಭೂಕುಸಿತ ಉಂಟಾಗುತ್ತಿರುವುದರಿಂದ ನೈಋುತ್ಯ ರೈಲ್ವೆಯು ಆ.23ರ ವರೆಗೂ ಬೆಂಗಳೂರು- ಮಂಗಳೂರು ಮಾರ್ಗದ ರೈಲುಗಳ ಸಂಚಾರ ರದ್ದುಗೊಳಿಸಿದೆ. 

ಸಕಲೇಶಪುರ- ಸುಬ್ರಹ್ಮಣ್ಯ ಘಟ್ಟಪ್ರದೇಶದಲ್ಲಿ ಭಾರೀ ಪ್ರಮಾಣದ ಮಳೆ ಆಗುತ್ತಿರುವುದರಿಂದ ಭೂಕುಸಿತ ಉಂಟಾಗಿ ರೈಲ್ವೆ ಹಳಿ ಮೇಲೆ ದೊಡ್ಡ ಪ್ರಮಾಣದ ಕಲ್ಲು, ಮಣ್ಣು, ಮರಗಳು ಬಿದ್ದಿವೆ. 

ಕರ್ನಾಟಕ ಪ್ರವಾಹದ ಹೆಚ್ಚಿನ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ಕಳೆದ ಐದು ದಿನಗಳಲ್ಲಿ ಈ ಮಾರ್ಗದಲ್ಲಿ 30 ಬಾರಿ ಭೂಕುಸಿತ ಉಂಟಾಗಿದೆ. ರೈಲ್ವೆ ಸಿಬ್ಬಂದಿ ಹಾಗೂ ಕಾರ್ಮಿಕರು ತೆರವು ಕಾರ್ಯಚರಣೆಯಲ್ಲಿ ತೊಡಗಿದ್ದಾರೆ. ಈ ಹಿನ್ನೆಲೆಯಲ್ಲಿ ಈ ಮಾರ್ಗದಲ್ಲಿ ರೈಲು ಸಂಚಾರವನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸಲಾಗಿದೆ ಎಂದು ನೈಋುತ್ಯ ರೈಲ್ವೆ ತಿಳಿಸಿದೆ.

click me!