
ನವದೆಹಲಿ (ಡಿ.08): ಕೇಂದ್ರ ಸರ್ಕಾರದ ನೋಟು ನಿಷೇಧ ಕ್ರಮವು ಇಂದು ಕೂಡಾ ಸಂಸತ್ತಿನಲ್ಲಿ ಗದ್ದಲಕ್ಕೆ ಕಾರಣವಾಗಿದೆ.
ರಾಜ್ಯಸಭೆ ಕಲಾಪಗಳು ಆರಂಭವಾಗುತ್ತಿದ್ದಂತೆ ವಿಪಕ್ಷ ಸದಸ್ಯರು ನೋಟು ಸರ್ಕಾರದ ನಿಷೇಧ ಕ್ರಮದ ಬಗ್ಗೆ ಆಕ್ಕ್ಷೇಪಗಳನ್ನೆತ್ತಿದ್ದಾರೆ. ನೊಟು ನಿಷೇಧ ಕ್ರಮವು ಜನವಿರೋಧಿಯಾಗಿದೆ ಎಂದು ಘೋಷಣೆಗಳನ್ನು ಕೂಗಲಾರಂಭಿಸಿದ್ದಾರೆ.
ಇದೇ ವೇಳೆ ಮಧ್ಯ ಪ್ರವೇಶಿಸಿದ ಕೇಂದ್ರ ಸಚಿವ ವೆಂಕಯ್ಯ ನಾಯ್ಡು, ವಿಪಕ್ಷ ನಾಯಕರು ಧರಣಿ ಹೆಸರಲ್ಲಿ ನಾಟಕ ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ.
ವೆಂಕಯ್ಯನಾಯ್ಡು ಮಾತಿಗೆ ತಿರುಗೇಟು ನೀಡಿದ ಕಾಂಗ್ರೆಸ್ ನಾಯಕ ಗುಲಾಮ್ ನಬಿ ಆಜಾದ್, ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಲಾರಂಭಿಸಿದ್ದಾರೆ.
ಸರ್ಕಾರ ಮತ್ತು ಪಕ್ಷಗಳ ಮಧ್ಯ ನಡೆದ ಮಾತಿನ ಚಕಮಕಿಯಿಂದಾಗಿ ರಾಜ್ಯಸಭೆಯಲ್ಲಿ ಗಲಾಟೆ ಹಾಗೇ ಮುಂದುವರೆದಿತ್ತು, ಹಾಗಾಗಿ ರಾಜ್ಯಸಭೆಯನ್ನು ಮುಂದೂಡಲಾಯ್ತು.
ಲೋಕಸಭೆ ಕಲಾಪ ಎಂದಿನಂತೆ ಆರಂಭಗೊಂಡಿತ್ತು. ಆದರೆ ವಿಪಕ್ಷಗಳ ನಾಯಕರು ಮಾತ್ರ ಕಲಾಪಕ್ಕೆ ಹಾಜರಾಗದೇ, ಸಂಸತ್ ಹೊರಗಡೆ ಪ್ರತಿಭಟನೆ ನಡೆಸಿದ್ದಾರೆ. ಬಳಿಕ ಕಲಾಪಕ್ಕೆ ಆಗಮಿಸಿದ ವಿಪಕ್ಷ ನಾಯಕರು ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಲು ಆರಂಭಿಸಿದ್ದಾರೆ. ಹೊಸ ವಿಚಾರದ ಚರ್ಚೆಗೆ ವಿಪಕ್ಷಗಳು ವಿರೋಧ ವ್ಯಕ್ತಪಡಿಸಿದ್ದರಿಂದಾಗಿ ಲೋಕಸಭೆ ಕಲಾಪ ಕೂಡ ಮುಂದೂಡಲಾಯ್ತು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.