
ಹುಬ್ಬಳ್ಳಿ [ಸೆ.05] : ಮಾಜಿ ಸಚಿವ ಡಿಕೆ ಶಿವಕುಮಾರ್ ಬಂಧನ ಹಿನ್ನೆಲೆ ನಡೆದ ಪ್ರತಿಭಟನೆಯಲ್ಲಿ ಕಲ್ಲು ಹೊಡೆದವರು , ಬೆಂಕಿ ಹಚ್ಚಿದವರು ಯಾರೂ ನಮ್ಮ ಕಾರ್ಯಕರ್ತರನ್ನ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಹುಬ್ಬಳ್ಳಿಯಲ್ಲಿ ಇಂದು ಮಾತನಾಡಿದ ಸಿದ್ದರಾಮಯ್ಯ ಕಾಂಗ್ರೆಸಿನವರು ಪ್ರತಿಭಟನೆ ನಡೆಸುತ್ತಿದ್ದ ವೇಳೆ ಕೆಲ ಕಿಡಿಗೇಡಿಗಳು ಸೇರಿಕೊಂಡು ಹಿಂಸಾ ಕೃತ್ಯ ಎಸಗಿದ್ದಾರೆ ಎಂದರು.
ಇನ್ನು ಡಿ.ಕೆ ಶಿವಕುಮಾರ್ ಅವರ ಬಂಧನ ರಾಜಕೀಯ ಪ್ರೇರಿತ. ಅದರಲ್ಲಿ ಯಾವುದೇ ರೀತಿಯ ಸಂಶಯ ಇಲ್ಲ ಎಂದು ಸಿದ್ದರಾಮಯ್ಯ ಹೇಳಿದರು.
ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ
ರಾಜ್ಯದಲ್ಲಿ ಕಳೆದ ಒಂದು ತಿಂಗಳ ಹಿಂದೆ ರಾಜ್ಯದಲ್ಲಿ ಉಂಟಾದ ಪ್ರವಾಹ ಪರಿಸ್ಥಿತಿ ನಿರ್ವಹಣೆಯಲ್ಲಿ ಸರ್ಕಾರ ಸಂಪೂರ್ಣ ವಿಫಲವಾಗಿದೆ. ಗಂಜಿ ಕೇಂದ್ರಗಳನ್ನು ಈಗಾಗಲೇ ಮುಚ್ಚಲಾಗಿದೆ. ಬೆಳೆ ಪರಿಹಾರ, ಮನೆ ಪರಿಹಾರ ಸಂತ್ರಸ್ಥರಿಗೆ ತಲುಪಿಲ್ಲ. ತಾತ್ಕಾಲಿಕ ಶೆಡ್ ಗಳನ್ನು ನಿರ್ಮಿಸಿ ಎಂದು ಡಿಸಿಗಳಿಗೆ ಸೂಚಿಸಿದ್ದೆ, ಆದರೆ ಅದೂ ಆಗಿಲ್ಲ ಎಂದು ಸಿದ್ದರಾಮಯ್ಯ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.