ಬೆಂಗಳೂರು[ಸೆ. 10] ರಾಜಕೀಯ ದ್ವೇಷದ ಕಾರಣದಿಂದ ನಾನು ಟಾರ್ಗೆಟ್ ಆಗಿದ್ದೇನೆ ಎಂದು ಡಿಕೆ ಶಿವಕುಮಾರ್ ಟ್ವಿಟ್ ಮಾಡಿದ್ದಾರೆ.
ಇಡಿ ವಶದಲ್ಲಿ ಇದ್ದರೂ ಭೇಟಿಯಾದ ಕುಂಟುಬಸ್ಥರ ಬಳಿ ಹೇಳಿಸಿ ಟ್ವೀಟ್ ಮಾಡಿ ಅಭಿಮಾನಿಗಳಿಗೆ ಸಂದೇಶ ನೀಡಿದ್ದಾರೆ.
ದೇವರು ಹಾಗೂ ನ್ಯಾಯಾಂಗದ ಮೇಲೆ ನನಗೆ ಅಪಾರ ನಂಬಿಕೆಯಿದೆ. ಕಾನೂನು ಹಾಗೂ ರಾಜಕೀಯವಾಗಿ ವಿಜಯಶಾಲಿಯಾಗುತ್ತೇನೆ ಎಂಬ ವಿಶ್ವಾಸವನ್ನು ಡಿಕೆಶಿ ಹೊರ ಹಾಕಿದ್ದಾರೆ. ಸೆ. 13ರವರೆಗೆ ಡಿಕೆ ಶಿವಕುಮಾರ್ ಇಡಿ ವಶದಲ್ಲಿ ಇರಬೇಕಿದ್ದು ಪ್ರಶ್ನೆಗಳಿಗೆ ಉತ್ತರ ನೀಡಬೇಕಿದೆ.
'ಮಾರಿ ಕೋಣ ಕಡಿದಂತೆ ‘ಡಿಕೆಶಿ ಬಲಿ’ ಕೊಟ್ಟಕಾಂಗ್ರೆಸ್ಸಿಗರು'
ಡಿಕೆಶಿ ಬಂಧನ ಖಂಡಿಸಿ ಒಕ್ಕಲಿಗರ ಕೂಟ ಬೆಂಗಳೂರಿನಲ್ಲಿ ಸೆ. 11 ರಂದು ಪ್ರತಿಭಟನೆ ಹಮ್ಮಿಕೊಂಡಿದೆ. ಶಾಂತಿಯುತ ಪ್ರತಿಭಟನೆ ನಡೆಸಿ.. 'ಜನರಿಗೆ ತೊಂದರೆ ಕೊಡುವುದು ಬೇಡ, ಸಾರ್ವಜನಿಕ ಆಸ್ತಿಗೆ ಧಕ್ಕೆ ಬೇಡ ಎಂದು ಶಿವಕುಮಾರ್ ಮನವಿ ಮಾಡಿಕೊಂಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.